ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ನಟಿ ಸಂಜನಾ ಜಾಮೀನು ಅರ್ಜಿ ಡಿಸೆಂಬರ್ 10ಕ್ಕೆ ಮುಂದೂಡಿಕೆ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಲಾಗಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಲಾಗಿದೆ.
ಸಂಜನಾ ಅನಾರೋಗ್ಯದ ಕಾರಣ ನೀಡಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ "ಆರೋಪಿಗೆ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಿ, ಚಿತ್ರೀಕರಣಕ್ಕೆ ಅವಕಾಶ ಬೇಡ. ಚಿಕಿತ್ಸೆ ಸಂಬಂಧ ಡಿಸೆಂಬರ್ 10ರ ಒಳಗೆ ವರದಿ ಕೊಡಿರಿ" ಎಂದು ಆದೇಶಿಸಿದೆ.
ಅಲ್ಲದೆ ಆ ವರದಿ ಬಂದ ನಂತರ ಜಾಮೀನಿನ ಬಗ್ಗೆ ನಿರ್ಧರಿಸೋಣ ಎಂದೂ ನ್ಯಾಯಾಲಯ ಹೇಳಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ಕಳೆದ ಎರಡೂವರೆ ತಿಂಗಳುಗಳಿನಿಂದ ಜೈಲಿನಲ್ಲಿದ್ದು ಜಾಮೀನಿಗಾಗಿ ಸತತ ಪ್ರಯತ್ನ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


