ಸಿನಿಮಾ ಸುದ್ದಿ

ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಕಾಮಿನಿ ರಾವ್ ಸಿನಿಮಾ ನಿರ್ಮಾಣ ಕ್ಷೇತ್ರಕ್ಕೆ ಪ್ರವೇಶ

ಪ್ರಸೂತಿ ಮತ್ತು ಸ್ತ್ರಿರೋಗ ತಜ್ಞೆಯಾಗಿ ಹೆಸರು ಮಾಡಿ, ಪದ್ಮಶ್ರೀ ಸೇರಿದಂತೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದಿರುವ ವೈದ್ಯೆ ಡಾ. ಕಾಮಿನಿ ಎ. ರಾವ್ ಮನರಂಜನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.

ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಕಾಮಿನಿ ರಾವ್ ಸಿನಿಮಾ ನಿರ್ಮಾಣ ಕ್ಷೇತ್ರಕ್ಕೆ ಪ್ರವೇಶ
ಸೊಸೆ ಪೂಜಾ ಜೊತೆ ಕಾಮಿನಿ ರಾವ್
Published On :

ಪ್ರಸೂತಿ ಮತ್ತು ಸ್ತ್ರಿರೋಗ ತಜ್ಞೆಯಾಗಿ ಹೆಸರು ಮಾಡಿ, ಪದ್ಮಶ್ರೀ ಸೇರಿದಂತೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದಿರುವ ವೈದ್ಯೆ ಡಾ. ಕಾಮಿನಿ ಎ. ರಾವ್ ಮನರಂಜನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.

ಪೂರ್ವಿ ಪ್ರೊಡಕ್ಷನ್ಸ್ ಹೆಸರಿನಲ್ಲಿ ಸ್ವಂತ ನಿರ್ಮಾಣ ಸಂಸ್ಥೆ ಆರಂಭಿಸುತ್ತಿದ್ದಾರೆ. ತಮ್ಮ ಸೊಸೆ, ಪೂಜಾ ಸಿದ್ದಾರ್ಥ್ ರಾವ್ ಜೊತೆಗೂಡಿ ನಿರ್ಮಾಣ ಸಂಸ್ಥೆ ಪ್ರಾರಂಭಿಸುತ್ತಿದ್ದಾರೆ.

ಪೂರ್ವಿ ಪ್ರೊಡಕ್ಷನ್ಸ್ ಸಂಸ್ಥೆ ತೆರೆಯುತ್ತಿರುವ ಮುಖ್ಯ ಉದ್ದೇಶ, ಸಿನಿಮಾ ನಿರ್ಮಾಣ, ಡಾಕ್ಯುಮೆಂಟರಿಗಳು, ಹರಟೆ ರೀತಿಯ ಕಾರ್ಯಕ್ರಮಗಳನ್ನು ಮತ್ತು ಎಜುಕೇಷನಲ್ ಸಿನಿಮಾಗಳನ್ನು ನಿರ್ಮಾಣ ಮಾಡುವ ಉದ್ದೇಶವಾಗಿದೆ.

ಸ್ಪೂರ್ತಿದಾಯಕ ಅಂಶಗಳ ಜತೆಗೆ, ಯಶಸ್ಸಿನ ಏಣಿ ಏರುವುದಕ್ಕೂ ರಹದಾರಿಯಾಗಿದೆ. ಸಾಮಾನ್ಯನಿಂದ ಅಸಾಮಾನ್ಯನರಿಗೂ ಸ್ಫೂರ್ತಿದಾಯಕ ಕಾರ್ಯಕ್ರಮವನ್ನೂ ಆಯೋಜಿಸುತ್ತಿದ್ದು, ಒಂದಷ್ಟು ಗಾಯಕರು ಮತ್ತು ಸಂಗೀತಗಾರರನ್ನ ಆಯ್ದುಕೊಂಡು ಅವರಿಂದ ಪೂರ್ವಿ ರಾಗ ಹರಟೆ ಎಂಬ ಕಾರ್ಯಕ್ರಮವನ್ನು ಕಾಮಿನಿ ರಾವ್  ಮಾಡಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.