ಚಿರು ಪುತ್ರ, ಮೇಘನಾ ರಾಜ್ ಸುಂದರ್ ರಾಜ್ ಗೂ ಕೊರೋನಾ ಪಾಸಿಟಿವ್
ಇತ್ತೀಚೆಗಷ್ಟೇ ತೊಟ್ಟಿಲ ಶಾಸ್ತ್ರ ಮುಗಿಸಿ ನಿರುಮ್ಮಳವಾಗಿದ್ದ ಮೇಘನಾ ಹಾಗೂ ಅವರ ಪೋಷಕರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂರು: ಇತ್ತೀಚೆಗಷ್ಟೇ ತೊಟ್ಟಿಲ ಶಾಸ್ತ್ರ ಮುಗಿಸಿ ನಿರುಮ್ಮಳವಾಗಿದ್ದ ಮೇಘನಾ ಹಾಗೂ ಅವರ ಪೋಷಕರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ಮೇಘನಾ ತಂದೆ, ನಟ ಸುಂದರರಾಜ್, ತಾಯಿ ಪ್ರಮೀಳಾ ಜೋಷಾಯ್, ಜ್ಯೂನಿಯರ್ ಚಿರು ಹಾಗೂ ಸ್ವತಃ ಮೇಘನಾ ಅವರಲ್ಲಿಯೂ ಸೋಂಕು ದೃಢಪಟ್ಟಿದೆ.
ನಮ್ಮ ಕುಟುಂಬದ ಎಲ್ಲರ ಮೇಲೂ ಕೊರೊನಾ ಪರಿಣಾಮ ಬೀರಿದೆ. ಮೇಘನಾ ಮತ್ತು ಮಗುವಿಗೆ ಕೂಡ ಪಾಸಿಟಿವ್ ವರದಿ ಬಂದಿದೆ ನಟ ಸುಂದರ್ ರಾಜ್ ತಿಳಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಪ್ರಮೀಳಾ ಜೋಷಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಸುಂದರ್ ರಾಜ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಮೇಘನಾ ಮತ್ತು ಚಿರು ಪುತ್ರ ಮನೆಯಲ್ಲೇ ಐಸೋಲೇಷನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


