'ಪ್ರಾರಂಭ' ಟ್ರೇಲರ್ ಗೆ ವೀಕ್ಷಕರ ಅಪಾರ ಮೆಚ್ಚುಗೆ
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಟ್ರೇಲರ್ ಬಿಡುಗಡೆಯಾದ ಕೇವಲ ಒಂದೇ ದಿನದಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡು, ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಟ್ರೇಲರ್ ಬಿಡುಗಡೆಯಾದ ಕೇವಲ ಒಂದೇ ದಿನದಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡು, ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.
ನಾಯಕ ಮನೋರಂಜನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರಾರಂಭ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿತ್ತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ. ಪ್ರದ್ಯೋತನ್ ಅವರ ಸಂಗೀತ ಹೆಚ್ಚಿನ ಮೆರುಗು ನೀಡಿದೆ. ಬೆಂಗಳೂರು, ಚಿಕ್ಕಮಗಳೂರು,ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆದಿದೆ.
ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಪ್ರಾರಂಭ ರಾರಾಜಿಸಲಿದೆ. ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ ಮೂಲಕ ನಿರ್ಮಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


