ರಾಘವೇಂದ್ರ ಹೆಗ್ಡೆ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಧ್ರುವಾ ಸರ್ಜಾಗೆ ಪ್ಯಾರಾ ಕಮಾಂಡೋ ಪಾತ್ರ!
ಸಾಮಾಜಿಕ ಜಾಲತಾಣದ ಮೂಲಕ ಧ್ರುವ ಸರ್ಜಾ ತಮ್ಮ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದು, "ರಾಘವೇಂದ್ರ ಹೆಗ್ಡೆ ಸರ್ ಅವರ ಜೊತೆಗೆ ನಾನು ಸಿನಿಮಾ ಮಾಡುತ್ತಿದ್ದು ಕಥೆ ಕೇಳಿ ಇಷ್ಟಪಟ್ಟಿದ್ದೇನೆ ಜೈ ಹನುಮಾನ್ ಎಂದು ಪೋಸ್ಟ್ ಹಾಕಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಧ್ರುವ ಸರ್ಜಾ ತಮ್ಮ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದು, "ರಾಘವೇಂದ್ರ ಹೆಗ್ಡೆ ಸರ್ ಅವರ ಜೊತೆಗೆ ನಾನು ಸಿನಿಮಾ ಮಾಡುತ್ತಿದ್ದು ಕಥೆ ಕೇಳಿ ಇಷ್ಟಪಟ್ಟಿದ್ದೇನೆ ಜೈ ಹನುಮಾನ್ ಎಂದು ಪೋಸ್ಟ್ ಹಾಕಿದ್ದಾರೆ.
2021 ರಿಂದ ಸಿನಿಮಾ ಚಿತ್ರೀಕರಣ ಪ್ರಾರಂಭವಾಗಲಿದ್ದು, ಕಥೆಯನ್ನು ಕೇಳಿ ಅಂತಿಮಗೊಳಿಸಲಾಗಿದೆ, ಮೊದಲ ಭಾಗದ ಸ್ಕ್ರೀನ್ ಪ್ಲೇಯನ್ನು ನಿರ್ದೇಶಕರು ವಿವರಿಸಿದ್ದು, ಎರಡನೇ ಭಾಗ ಜ.20 ರ ವೇಳೆಗೆ ಅಂತಿಮಗೊಳ್ಳಲಿದೆ ಈ ಬಳಿಕ ಶೂಟಿಂಗ್ ನಡೆಯಲಿದೆ ಎಂದು ಸಿನಿಮಾ ಎಕ್ಸ್ ಪ್ರೆಸ್ ಗೆ ನಿರ್ದೇಶಕ ರಾಘವೇಂದ್ರ ಹೆಗ್ಡೆ ತಿಳಿಸಿದ್ದಾರೆ.
ನೈಜ ಘಟನೆಗಳ ಅಂಶಗಳು ಈ ಸಿನಿಮಾದಲ್ಲಿ ಕಾಣಸಿಗಲಿದ್ದು, ಧ್ರುವಾ ಸರ್ಜಾ ಪ್ಯಾರಾ ಕಮಾಂಡೋ ಪಾತ್ರದಲ್ಲಿ ನಟಿಸಲಿದ್ದಾರೆ. ಎಲ್ಲಾ ವರ್ಗದವರನ್ನೂ ಆಕರ್ಷಿಸುವ ಸಾಮರ್ಥ್ಯವನು ಈ ಸಿನಿಮಾ ಚಿತ್ರಕಥೆ ಹೊಂದಿರಲಿದೆ ಎಂದು ಸಿನಿಮಾವನ್ನು ಬಹುಭಾಶೆಗಳಲ್ಲಿ ನಿರ್ದೇಶಿಸಲು ಚಿಂತನೆ ನಡೆಸಿರುವ ರಾಘವೇಂದ್ರ ಹೆಗ್ಡೆ ತಿಳಿಸಿದ್ದಾರೆ.
2021 ರಲ್ಲಿ ಧ್ರುವ ಸರ್ಜಾ ಅವರ ಹೊಸ ಸಿನಿಮಾ ನಂದ ಕಿಶೋರ್ ನಿರ್ದೇಶನದ ಪೊಗರು ಸಿನಿಮಾ ಬಿಡುಗಡೆಯಾಗಲಿದೆ, ದುಬಾರಿ ಚಿತ್ರ ಸಹ ಪ್ರೇಕ್ಷಕರೆದುರು ಬರಲು ಸಜ್ಜುಗೊಳ್ಳುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


