ಕಂಠಿ, ಸಾಹೇಬ ಸಿನಿಮಾ ನಿರ್ದೇಶಕ ಭರತ್ ಹಠಾತ್ ನಿಧನ
ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.

ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.
45 ವರ್ಷದ ಭರತ್ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ ಭರತ್, ಹೊಸ ಸಿನಿಮಾದ ತಯಾರಿಯಲ್ಲಿದ್ದಾಗಲೇ ವಿಧಿವಶರಾಗಿದ್ದಾರೆ. ರಾಮನಗರ ಚಿಕ್ಕಮುಳುವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆ ಯಲ್ಲಿ ವಾಸವಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


