ಸೂಪರ್ ಸ್ಟಾರ್ ರಜಿನಿಕಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್!
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಹೈದರಾಬಾದ್: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಹಿಂದೆ ತೀವ್ರ ರಕ್ತದೊತ್ತಡದ ಸಮಸ್ಯೆಯಿಂದಾಗಿ ಅವರು ಡಿಸೆಂಬರ್ 25ರಂದು ಇಲ್ಲಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಬಳಿಕ ರಜಿನಿಕಾಂತ್ ಅವರ ರಕ್ತದೊತ್ತಡ ಸ್ಥಿರವಾಗಿದ್ದು, ಆರೋಗ್ಯ ಸುಧಾರಿಸಿದೆ. ಅಂತೆಯೇ ಒಂದು ವಾರ ಸಂಪೂರ್ಣ ವಿಶ್ರಾಂತಿ ಮತ್ತು ರಕ್ತದೊತ್ತಡದ ಮೇಲೆ ನಿಗಾವಹಿಸುವುದು, ದೈಹಿಕಶ್ರಮ ವಹಿಸದಿರುವುದು ಹಾಗೂ ಒತ್ತಡಕ್ಕೆ ಒಳಗಾಗಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
2021ರ ಜನವರಿಯಲ್ಲಿ ರಜನಿಕಾಂತ್ ನೇತೃತ್ವದ ಹೊಸ ರಾಜಕೀಯ ಪಕ್ಷಕ್ಕೆ ಚಾಲನೆ ಸಿಗಲಿದ್ದು, ಡಿಸೆಂಬರ್ 31ರಂದು ಅಧಿಕೃತ ಪ್ರಕಟಣೆ ಹೊರ ಬೀಳುವ ಸಾಧ್ಯತೆಯಿದೆ. ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದ್ದು, ರಜನಿ ರಾಜಕೀಯ ಎಂಟ್ರಿ ತೀವ್ರ ಕುತೂಹಲ ಕೆರಳಿಸಿದೆ.

ಇತ್ತ ಸಿನಿಮಾಗಳಲ್ಲೂ ಬಿಸಿಯಾಗಿರುವ ರಜಿನಿಕಾಂತ್ ಸನ್ ಪಿಕ್ಚರ್ಸ್ ನಿರ್ಮಾಣದ 'ಅಣ್ಣಾತೆ' ಎಂಬ ತಮಿಳು ಚಿತ್ರದ ಚಿತ್ರೀಕರಣಕ್ಕಾಗಿ ಡಿಸೆಂಬರ್ 13 ರಿಂದ ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದಾರೆ. ಚಿತ್ರೀಕರಣ ತಂಡದಲ್ಲಿ ನಾಲ್ವರು ಸಿಬ್ಬಂದಿಗೆ ಕೋವಿಡ್-19 ದೃಢಪಟ್ಟ ಬೆನ್ನಲ್ಲೇ ರಜಿನಿಕಾಂತ್ ಪರೀಕ್ಷೆಗೆ ಒಳಗಾಗಿದ್ದರು. ವರದಿ ನೆಗೆಟಿವ್ ಬಂದಿದ್ದರೂ ಅವರು ಪ್ರತ್ಯೇಕ ವಾಸದಲ್ಲಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


