ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸ್ಥಿರ, ಭೀತಿಗೊಳಗಾಗುವ ಅಗತ್ಯವಿಲ್ಲ: ಅಪೋಲೋ ಆಸ್ಪತ್ರೆ
ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸ್ಥಿರವಾಗಿದ್ದು, ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸ್ಥಿರವಾಗಿದ್ದು, ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.
ರಜನಿಕಾಂತ್ ಅವರ ವೈದ್ಯಕೀಯ ವರದಿಯಲ್ಲಿ ಯಾವುದೇ ರೀತಿಯ ಆತಂಕಕ್ಕೊಳಗಾಗುವ ವಿಚಾರಗಳಿಲ್ಲ. ರಕ್ತದೊತ್ತಡ ಏರಿಪೇರಾಗಿರುವುದರಿಂದ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡ ತಪಾಸಣೆ ನಡೆಸುತ್ತಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಕುರಿತು ಇಂದು ನಿರ್ಧಾರ ಕೈಗೊಳ್ಳಲಿದ್ದಾರೆಂದು ಆಸ್ಪತ್ರೆ ತಿಳಿಸಿದೆ.
ರಜನಿಕಾಂತ್ ಅವರ ಎಲ್ಲಾ ವೈದ್ಯಕೀಯ ಪರೀಕ್ಷೆಗಳ ವರದಿಗಳೂ ಬಂದಿವೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.
ಡಿಸೆಂಬರ್ 13ರಿಂದ ಹೈದರಾಬಾದ್ನಲ್ಲಿದ್ದ ತಲೈವಾ, ಅಣ್ಣಾತೆ ಚಿತ್ರದ ಶೂಟಿಂಗ್ನಲ್ಲಿ ಭಾಗವಹಿಸಿದ್ದರು. ಈ ವೇಳೆ ಚಿತ್ರತಂಡದ 8 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.
ಬಳಿಕ ಡಿಸೆಂಬರ್ 22ರಂದು ರಜಿನಿಕಾಂತ್ಗೆ ಕೊರೊನಾ ಟೆಸ್ಟ್ ನಡೆಸಲಾಗಿದ್ದು ರಿಪೋರ್ಟ್ ನೆಗೆಟಿವ್ ಎಂದು ಬಂದಿತ್ತು. ಆದರೂ ಶುಕ್ರವಾರ ಸೆಲ್ಫ್ ಕ್ವಾರಂಟೈನ್ ಆಗಿದ್ದ ರಜಿನಿಕಾಂತ್ ಅವರಿಗೆ, ರಕ್ತದೊತ್ತಡದಲ್ಲಿ ಏರುಪೇರಾಗಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


