ಸಿನಿಮಾ ಸುದ್ದಿ

ನಿಖಿಲ್ ಕುಮಾರಸ್ವಾಮಿ ಲವ್ ಸ್ಟೋರಿಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ ಎ.ಪಿ. ಅರ್ಜುನ್

ಅದ್ಧೂರಿ ಲವರ್ ಶೂಟಿಂಗ್ ನಡೆಯುತ್ತಿರುವಾಗಲೇ ಮತ್ತೊಂದು ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ನಿಖಿಲ್ ಕುಮಾರಸ್ವಾಮಿ ನಾಯಕನಾಗಿರಲಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಲವ್ ಸ್ಟೋರಿಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ ಎ.ಪಿ. ಅರ್ಜುನ್
ನಿಖಿಲ್ ಕುಮಾರ್
Published On :

ಲವ್ ಸ್ಟೋರಿಗಳನ್ನು ಚೆಂದವಾಗಿ ಹೇಳಿ ಗೆಲ್ಲೋ ಎ.ಪಿ.ಅರ್ಜುನ್, ಈಗಾಗಲೇ ಕಿಸ್ ಚಿತ್ರದ ಗುಂಗಿನಿಂದ ಹೊರಬಂದು ಅದ್ದೂರಿ ಲವರ್ ಬೆನ್ನು ಹತ್ತಿದ್ದಾರೆ. ಅದ್ಧೂರಿ ಲವರ್ ಶೂಟಿಂಗ್ ನಡೆಯುತ್ತಿರುವಾಗಲೇ ಮತ್ತೊಂದು ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ನಿಖಿಲ್ ಕುಮಾರಸ್ವಾಮಿ ನಾಯಕನಾಗಿರಲಿದ್ದಾರೆ.

ಅರ್ಜುನ್ ನಿರ್ದೇಶನದ ಈ ಸಿನಿಮಾ ಮುಂದಿನ ವರ್ಷದ ಮೇ ಅಥವಾ ಜೂನ್ ತಿಂಗಳಲ್ಲಿ ಸೆಟ್ಟೇರಲಿದೆ, ನಿರ್ದೇಶಕ ಅರ್ಜುನ್ ಅವರ ಆರನೇ ಸಿನಿಮಾ ಇದಾಗಿದೆ.

ಅಂಬಾರಿ, ಅದ್ದೂರಿ, ಐರಾವತ ದಂತಹ ಪ್ರೇಮಕಥೆಗಳನ್ನು ನಿರ್ದೇಶಿಸಿರುವ ಅರ್ಜುನ್ ಕಿಸ್ ಸಿನಿಮಾ ಹೀರೋ ಅರ್ಜನ್ ಜೊತೆ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ.

ಕಿರುತೆರೆಯಿಂದ ಬೆಳ್ಳಿತೆರೆಗೆ ಹಾರಿರುವ ವಿರಾಟ್ ಕಿಸ್ ಮೂಲಕ ಸಿನಿಮಾ ರಂಗ ಪ್ರವೇಶಿಸಿದರು, ಶ್ರೀಲೀಲಾ ಕೂಡ ಕಿಸ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 

ನಿರ್ಮಾಪಕ ಮತ್ತು ನಿರ್ದೇಶಕರ ಅಧಿಕೃತ ಘೋಷಣೆ ಆಗಬೇಕಿದೆ, ವಿರಾಟ್ ಜೊತೆಗಿನ ಮುಂದಿನ ಸಿನಿಮಾ ಶೂಟಿಂಗ್ ಜನವರಿ ನಾಲ್ಕನೇ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.