ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ನಟ ಶಹಬಾಜ್ ಖಾನ್ ವಿರುದ್ಧ ಎಫ್ಐಆರ್ ದಾಖಲು
ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇರೆಗೆ ಬಾಲಿವುಡ್ ನಟ ಶಹಬಾಜ್ ಖಾನ್ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಮುಂಬೈ: ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇರೆಗೆ ಬಾಲಿವುಡ್ ನಟ ಶಹಬಾಜ್ ಖಾನ್ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮುಂಬೈನ ಒಶಿವಾರಾ ಪೊಲೀಸ್ ಠಾಣೆಯಲ್ಲಿ ಶಹಬಾಜ್ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆ 354 (ಕ್ರಿಮಿನಲ್ ಮತ್ತು ದೌರ್ಜನ್ಯ) ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ತನಿಖೆ ಆರಂಭಿಸಿದ್ದಾರೆಂದು ವರದಿಗಳು ತಿಳಿಸಿವೆ.
ಶಹಬಾಜ್ ಖಾನ್ ಅವರು ಬಾಲಿವುಡ್ ನಲ್ಲಿ ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಯುಗ್, ದಿ ಗ್ರೇಟ್ ಮರಾಠ, ಬೆತಾಳ್ ಪಚಿಸಿ, ಚಂದ್ರಕಾಂತ ಮತ್ತು ದಿ ಸ್ವಾರ್ಡ್ ಆಫ್ ಟಿಪ್ಪು ಸುಲ್ತಾನ್, ರಾಮ್ ಸಿಯಾ ಕೆ ಲವ ಕುಶ, ತೆನಾಲಿ ರಾಮ, ದಾಸ್ತಾನ್-ಇ-ಮೊಹಬತ್ ಸಲೀಮ್ ಅನಾರ್ಕಲಿಯಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


