ಸಿನಿಮಾ ಸುದ್ದಿ

ಸ್ಟಂಟ್ ಮಾಡುವಾಗ ತಮಿಳು ನಟ ಅಜಿತ್‍ಗೆ ಅಪಘಾತ: ಅಭಿಮಾನಿಗಳಲ್ಲಿ ಆತಂಕ!

ಸ್ಟಂಟ್ ಮಾಡುವಾಗ ತಮಿಳು ನಟ ಅಜಿತ್ ಕುಮಾರ್ ಗೆ ಅವರಿಗೆ ಅಪಘಾತವಾಗಿದ್ದು ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ.

ಸ್ಟಂಟ್ ಮಾಡುವಾಗ ತಮಿಳು ನಟ ಅಜಿತ್‍ಗೆ ಅಪಘಾತ: ಅಭಿಮಾನಿಗಳಲ್ಲಿ ಆತಂಕ!
ಅಜಿತ್ ಕುಮಾರ್
Published On :

ಚೆನ್ನೈ: ಸ್ಟಂಟ್ ಮಾಡುವಾಗ ತಮಿಳು ನಟ ಅಜಿತ್ ಕುಮಾರ್ ಗೆ ಅವರಿಗೆ ಅಪಘಾತವಾಗಿದ್ದು ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. 

ಹೊಸ ಚಿತ್ರವೊಂದರಲ್ಲಿ ಅಜಿತ್ ನಟಿಸುತ್ತಿದ್ದಾರೆ. ಈ ಚಿತ್ರದ ರೇಸ್ ಸೀನ್ ಶೂಟ್ ಮಾಡುತ್ತಿದ್ದಾಗ ಬೈಕ್ ಅಪಘಾತವಾಗಿದೆ. ಈ ವೇಳೆ ಅಜಿತ್ ಅವರಿಗೆ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಅಜಿತ್ ಹಲವು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕಾಗಿದೆ. 

ತಮಿಳು ನಿರ್ದೇಶಕ ಎಚ್ ವಿನೋದ್ ಆ್ಯಕ್ಷನ್ ಕಟ್ ಹೇಳುತ್ತಿರುವ ಹೊಸ ಚಿತ್ರದಲ್ಲಿ ಅಜಿತ್ ನಟಿಸುತ್ತಿದ್ದಾರೆ. ಚೆನ್ನೈನಲ್ಲಿ ನಡೆಯುತ್ತಿದ್ದ ಸಾಹಸ ಸನ್ನಿವೇಶದ ಚಿತ್ರೀಕರಣದ ಸಂದರ್ಭದಲ್ಲಿ ಅಜಿತ್ ಓಡಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. 

ಬೈಕ್ ನಿಂದ ಕೆಳಗೆ ಬಿದ್ದಿದ್ದರಿಂದ ಅಜಿತ್ ಅವರಿಗೆ ಗಾಯವಾಗಿದ್ದು ಇನ್ನು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇನ್ನ ತಮ್ಮ ನೆಚ್ಚಿನ ನಟ ಬೇಗ ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.