ದರ್ಶನ್ ನಟನೆಯ ರಾಬರ್ಟ್ ತೆಲುಗು ಮತ್ತು ಕನ್ನಡದಲ್ಲಿ ಏಕಕಾಲಕ್ಕೆ ರಿಲೀಸ್
ಉಮಾಪತಿ ಶ್ರೀನಿವಾಸ ಗೌಡ ನಿರ್ಮಾಣದ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ.

ಉಮಾಪತಿ ಶ್ರೀನಿವಾಸ ಗೌಡ ನಿರ್ಮಾಣದ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ.
ನಿರ್ದೇಶಕ ತರುಣ್ ಸುಧೀರ್ ಮತ್ತು ದರ್ಶನ್ ಜೋಡಿಯಲ್ಲಿ ಬರುತ್ತಿರುವ ರಾಬರ್ಟ್ ಮಾಸ್ ಸಿನಿಮಾವಾಗಿದೆ. ಇದೇ ಸಮಯದಲ್ಲಿ ತೆಲುಗು ಪ್ರೇಕ್ಷಕರಿಗೋಸ್ಕರವೂ ಕೆಲಸ ನಡೆಯುತ್ತಿದೆ. ಈ ಸಂಬಂಧ ಟಾಲಿವುಡ್ ನಿರ್ಮಾಪಕರ ಜೊತೆ ಚರ್ಚೆ ನಡೆಸಲಾಗಿದೆ.
ದರ್ಶನ್ ಹಿಂದಿನ ಸಿನಿಮಾ ಕುರುಕ್ಷೇತ್ರ ಹಲವು ಭಾಷೆಗಳಲ್ಲಿ ರಿಲೀಸ್ ಆಗಿತ್ತು. ಹೀಗಾಗಿ ರಾಬರ್ಟ್ ಸಿನಿಮಾವನ್ನು ಬೇರೆ ಬೇರೆ ಭಾಷೆಗಳಲ್ಲಿ ಅಂದರೆ ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಮೋಷನಲ್ ಥ್ರಿಲ್ಲರ್ ಕಥೆಯಾಗಿರುವ ರಾಬರ್ಟ್ ಸಿನಿಮಾದಲ್ಲಿಆಶಾ ಭಟ್ ನಾಯಕಿಯಾಗಿದ್ದಾರೆ. ಜಗಪತಿ ಬಾಬು, ರವಿ ಶಂಕರ್, ವಿನೋದ್ ಪ್ರಭಾಕರ್ ಮತ್ತು ಸೋನಾಲ್ ಮಾಂಟೆರಿಯೋ, ಚಿಕ್ಕಣ್ಣ ಮುಂತಾದವರು ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


