ಯುಗಾದಿಗೆ 'ಸಲಗ'ನ ದರ್ಬಾರ್ ಆರಂಭ!
ವಿಜಯ್ ಚೊಚ್ಚಲ ನಿರ್ದೇಶನದ "ಸಲಗ" ಚಿತ್ರದ ರಿಲೀಸಿಂಗ್ ಡೇಟ್ ಫಿಕ್ಸ್ ಆಗಿದೆ. ಚಿತ್ರವು ಇದೇ ಯುಗಾದಿ ಹಬ್ಬಕ್ಕೆ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ.

ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದ "ಸಲಗ" ಚಿತ್ರದ ರಿಲೀಸಿಂಗ್ ಡೇಟ್ ಫಿಕ್ಸ್ ಆಗಿದೆ. ಚಿತ್ರವು ಇದೇ ಯುಗಾದಿ ಹಬ್ಬಕ್ಕೆ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ.
ಈ ಮುನ್ನ ಮಾ.23ಕ್ಕೆ ಚಿತ್ರ ಬಿಡುಗಡೆ ಎಂದು ಹೇಳಲಾಗಿತ್ತಾದರೂ ಯುಗಾದಿ ಹಬ್ಬದ ಪ್ರಯುಕ್ತ ಮಾ. 27ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ತಯಾರಿ ನಡೆಸಿದೆ.
ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು ಸಂಗೀತ ನಿರ್ದೇಶಕ ಚರಣ್ ರಾಜ್ ರೀ ರೆಕಾರ್ಡಿಂಗ್ ಕೆಲಸದಲ್ಲಿ ತೊಡಗಿದ್ದಾರೆ.
"ಟಗರು" ಬಳಿಕ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಅವರ ಎರಡನೇ ಯೋಜನೆ ಇದಾಗಿದ್ದು ಚಿತ್ರದಲ್ಲಿ ಸಂಜನಾ ಆನಂದ್ ವಿಜಯ್ ಗೆ ಜೋಡಿಯಾಗಿ ಕಾಣಿಸಿಕೊಳ್ಲುತ್ತಿದ್ದಾರೆ.ಧನಂಜಯ್ ಪೋಲೀಸ್ ಪಾತ್ರದಲ್ಲಿ ಮಿಂಚಿದ್ದರೆ ಅಚ್ಯುತ್ ಕುಮಾರ್, ತ್ರಿವೇಣಿ ರಾವ್, ಮತ್ತು ಯಶ್ ಶೆಟ್ಟಿ ಸಹ ಮುಖ್ಯ ಭೂಮಿಕೆಯಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


