ಕಿಚ್ಚ ಸುದೀಪ್ ಗೆ ಸಲ್ಮಾನ್ ಖಾನ್ ಕೊಟ್ರು ದುಬಾರಿ ಗಿಫ್ಟ್!
ಸಲ್ಮಾನ್ ಖಾನ್ ಕಿಚ್ಚ ಸುದೀಪ್ ಗೆ ಬಿಎಂಡಬ್ಲ್ಯೂ ಎಂ5 ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಇದರಿಂದ ಖುಷಿಯಾಗಿರುವ ಕಿಚ್ಚ ತಮ್ಮ ಸಂತೋಷವನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದಾರೆ.

ನಟ ಕಿಚ್ಚ ಸುದೀಪ್ ಗೆ ಇದು ಸಂಭ್ರಮದ ಕಾಲ! "ದಬಾಂಗ್-3" ಸಿನಿಮಾದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಜತೆ ಅಭಿನಯಿಸಿದ್ದ ಕ್ಷಣ ಅತ್ಯದ್ಭುತವಾಗಿತ್ತು ಎಂದ್ದಿದ್ದ ಸುದೀಪ್ ಆ ವೇಳೆಯಿಂದ ತಮ್ಮ ಇಬ್ಬರ ನಡುವೆ ಆತ್ಮೀಯತೆ ಹೆಚ್ಚಿದೆ ಎಂದೂ ಹೇಳಿಕೊಂಡಿದ್ದರು. ಇದಕ್ಕೆ ಸಾಕ್ಷಿ ಎಂಬಂತೆ ಬಾಲಿವುಡ್ ಸ್ಟಾರ್ ಸಲ್ಮಾನ್ ಕಿಚ್ಚ ಸುದೀಪ್ ಗೆ ಭರ್ಜರಿ ಗಿಫ್ಯ್ ಒಂದನ್ನು ನೀಡಿದ್ದಾರೆ.
ಸಲ್ಮಾನ್ ಖಾನ್ ಕಿಚ್ಚ ಸುದೀಪ್ ಗೆ ಬಿಎಂಡಬ್ಲ್ಯೂ ಎಂ5 ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಇದರಿಂದ ಖುಷಿಯಾಗಿರುವ ಕಿಚ್ಚ ತಮ್ಮ ಸಂತೋಷವನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದಾರೆ.
"ನಾವು ಒಳ್ಳೆಯದನ್ನು ಮಾಡಿದರೆ ನಮಗೂ ಯಾವಾಗಲೂ ಒಳ್ಳೆಯದೇ ಆಗುತ್ತದೆ ಎಂಬ ಸಾಲನ್ನು ನಾನು ಇನ್ನಷ್ಟು ನಂಬುವಂತೆ ಮಾಡಿದ್ದು ನಟ ಸಲ್ಮಾನ್ ಖಾನ್! ಅವರು ಹೊಚ್ಚ ಹೊಸ ಬಿಎಂಡಬ್ಲ್ಯೂ ಎಂ5 ಕಾರಿನೊಡನೆ ನನ್ನ ಮನೆಗೆ ಆಗಮಿಸಿದಾಗ ನನಗೆ ನಿಜಕ್ಕೂ ಅಚ್ಚರಿಯಾಗಿತ್ತು.
"ನನ್ನ ಕುಟುಂಬದ ಮೇಲೆ ಸಲ್ಮಾನ್ ಖಾನ್ ಈ ಪರಿ ಪ್ರೀತಿ ತೋರಿಸುತ್ತಿರುವುದಕ್ಕೆ ಧನ್ಯವಾದಗಳು! ನಿಮ್ಮ ಜತೆಗೆ ಕೆಲಸ ಮಾಡಿರುವುದು ನನಗೊಂದು ಗೌರವ ಹಾಗೂ ನೀವು ನನ್ನ ಮನೆಗೆ ಭೇಟಿ ನೀಡಿರುವುದು ನನ್ನ ಪಾಲಿಗೆ ದೊಡ್ಡ ಉಡುಗೊರೆ" ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
ಇನ್ನು ಇತ್ತೀಚೆಗೆ ಸಲ್ಮಾನ್ ಖಾನ್ ಹುಟ್ಟುಹಬ್ಬದಂದು ನಡೆದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಕುಟುಂಬ ಭಾಗವಹಿಸಿತ್ತು. ಕಳೆದ ಬಾರಿ ಸಲ್ಮಾನ್ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಅವರು ನಟನ ತಂದೆ-ತಾಯಿಯನ್ನು ಸಹ ಭೇಟಿಯಾಗಿದ್ದರು.ಅಲ್ಲದೆ ಸಲ್ಮಾನ್ ಈ ಹಿಂದೆ ಕಿಚ್ಚ ಸುದೀಪ್ ಗೆ ತಮ್ಮ ಪ್ರೀತಿಯ ಣಾಯಿಯ ಚಿತ್ರ ಪೇಂಟ್ ಮಾಡಿರುವ ಟಿ ಶರ್ಟ್ ಒಂದನ್ನು ಸಹ ಗಿಫ್ಟ್ ಕೊಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


