ಸಿನಿಮಾ ಸುದ್ದಿ

ಫೆ 26ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: 50 ದೇಶಗಳ 200 ಸಿನಿಮಾಗಳ ಪ್ರದರ್ಶನ

ಮುಂದಿನ ತಿಂಗಳು 26 ರಿಂದ ನಗರದಲ್ಲಿ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು.

ಫೆ 26ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: 50 ದೇಶಗಳ 200 ಸಿನಿಮಾಗಳ ಪ್ರದರ್ಶನ
ಮುಖ್ಯಮಂತ್ರಿ ಯಡಿಯೂರಪ್ಪ ಅವರು 12ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು.
Published On :

ಬೆಂಗಳೂರು: ಮುಂದಿನ ತಿಂಗಳು 26 ರಿಂದ ನಗರದಲ್ಲಿ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು.

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಲಾಂಛನ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ.ಸಿ.ಪಾಟೀಲ್, ಶಾಸಕ ಎಸ್.ಆರ್.ವಿಶ್ವನಾಥ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಉಪಸ್ಥಿತರಿದ್ದರು. ಬ್ರವರಿ 26 ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಿಎಂ ಯಡಿಯೂರಪ್ಪ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ, ವಾರ್ತಾ ಇಲಾಖೆ, ಚಲನಚಿತ್ರ ವಾಣಿಜ್ಯ ಮಂಡಳಿಗಳ ಸಹಯೋಗದೊಡನೆ ಈ ಬಾರಿಯ ಚಲನಚಿತ್ರೋತ್ಸವ ನಡೆಯಲಿದ್ದು ರಾಜಾಜಿನಗರದ ಓರಿಯನ್ ಮಾಲ್ ನ 11 ಪರದೆಯಲ್ಲಿ ಚಿತ್ರ ಪ್ರದರ್ಶನವಾಗಲಿದೆ. 

ಒಟ್ಟಾರೆ ಏಳು ದಿನ ಹದಿನಾಲ್ಕು ವಿಭಾಗಗಳಲ್ಲಿ 50 ದೇಶಗಳ 200 ಚಿತ್ರಗಳು ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ. ಚಿತ್ರೋತ್ಸವಕ್ಕೆ ಪ್ರವೇಶ ದರ ಸಹ ನಿಗದಿಯಾಗಿದ್ದು ಸಾಮಾನ್ಯ ಜನರಿಗೆ 800  ರು. ಚಿತ್ರತಂಡ, ಚಲನಚಿತ್ರ ವಿದ್ಯಾರ್ಥಿಗಳಿಗೆ 400 ರು. ವಿಧಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.