ಸಿನಿಮಾ ಸುದ್ದಿ

'ಬಂಪರ್' ಮುಹೂರ್ತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿ

ಮಕರ ಸಂಕ್ರಾಂತಿ ದಿನವಾದ ನಾಳೆ ಧನ್ವೀರ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಬಂಪರ್ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಧನ್ವೀರ್ ಹುಟ್ಟುಹಬ್ಬದಂದು (ಸೆಪ್ಟೆಂಬರ್ 8) ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿತ್ತು.

'ಬಂಪರ್' ಮುಹೂರ್ತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿ
ಚಾಲೆಂಜಿಂಗ್ ಸ್ಟಾರ್ ದರ್ಶನ್
Published On :

ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ನಾಳೆ ಧನ್ವೀರ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಬಂಪರ್  ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.  
ಧನ್ವೀರ್ ಹುಟ್ಟುಹಬ್ಬದಂದು (ಸೆಪ್ಟೆಂಬರ್ 8)  ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿತ್ತು. 

ಹರಿ ಸಂತೋಷ್ ನಿರ್ದೇಶನದ ಈ ಚಿತ್ರವನ್ನು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದು, ಫೆಬ್ರವರಿ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದೆ. ಉಳಿದ ಕಲಾವಿದರು ಹಾಗೂ ಚಿತ್ರತಂಡದ ಅಂತಿಮ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅಜನೀಶ್ ಬಿ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ.

 ರಕ್ಷಿತ್ ಶೆಟ್ಟಿ ಅಭಿನಯದ ಸೂಪರ್ ಹಿಟ್ ಚಿತ್ರ ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದ ಅಜನೀಶ್ ಬಿ ಲೋಕನಾಥ್ ಇದೀಗ ಬಂಪರ್ ಚಿತ್ರಕ್ಕೂ ಸಂಗೀತ ಒದಗಿಸಲಿದ್ದಾರೆ. 

 ಸುನಿ ನಿರ್ದೇಶನದ ಬಜಾರ್ ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸಿರುವ ಧನ್ವೀರ್ ಗೆ ಇದು ಎರಡನೇ ಸಿನಿಮಾವಾಗಿದೆ. ಭರಾಟೆ ನಂತರ ಸುಪ್ರೀತ್ ನಿರ್ಮಾಣದ ಎರಡನೇ ಸಿನಿಮಾ ಇದಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.