ಸಿನಿಮಾ ಸುದ್ದಿ

'ಭಜರಂಗಿ 2' ಚಿತ್ರದ ಎರಡನೇ ಪೋಸ್ಟರ್ ನಲ್ಲಿ ಶಿವರಾಜ್ ಕುಮಾರ್ ನೋಟಕ್ಕೆ ಪ್ರೇಕ್ಷಕರು ಫಿದಾ 

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಚಿತ್ರದ ಎರಡನೇ ಪೋಸ್ಟರ್ ಬಿಡುಗಡೆಯಾಗಿದ್ದು ಚಿತ್ರಪ್ರೇಮಿಗಳಲ್ಲಿ ಮತ್ತು ಶಿವರಾಜ್ ಕುಮಾರ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

'ಭಜರಂಗಿ 2' ಚಿತ್ರದ ಎರಡನೇ ಪೋಸ್ಟರ್ ನಲ್ಲಿ ಶಿವರಾಜ್ ಕುಮಾರ್ ನೋಟಕ್ಕೆ ಪ್ರೇಕ್ಷಕರು ಫಿದಾ 
ಶಿವರಾಜ್ ಕುಮಾರ್
Published On :

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಚಿತ್ರದ ಎರಡನೇ ಪೋಸ್ಟರ್ ಬಿಡುಗಡೆಯಾಗಿದ್ದು ಚಿತ್ರಪ್ರೇಮಿಗಳಲ್ಲಿ ಮತ್ತು ಶಿವರಾಜ್ ಕುಮಾರ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.


ಪೋಸ್ಟರ್ ನಲ್ಲಿ ಕೋಪಿಷ್ಠ ಶಿವನಾಗಿ ಮತ್ತು ಅವರನ್ನು ಪೂಜಿಸುವ ಚಾಣಕ್ಯನ ಪಾತ್ರಗಳು ಮೂಡಿಬಂದಿದೆ. ಈ ಚಿತ್ರ ಆರಾಧನೆಗೆ ಸ್ವಾತಂತ್ರ್ಯ ಬೇಕು ಎಂದು ಕೇಳುತ್ತದೆ. ಎರಡನೇ ಪೋಸ್ಟರ್ ಯಾರಿಗೋ ಹುಡುಕಾಟ ನಡೆಸುವ ಹಾಗಿದೆ. 

Story image


ಈ ಹಿಂದೆ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ ಚಿತ್ರದ ಟೈಟಲ್ ನ್ನು ತೆಗೆದುಕೊಂಡು ಭಜರಂಗಿ 2 ಎಂದು ಇಡಲಾಗಿದ್ದು ಜಯಣ್ಣ ಕಂಬೈನ್ಸ್ ನಡಿ ನಿರ್ಮಾಣವಾಗುತ್ತಿದೆ. ಸೆಂಚುರಿ ಸ್ಟಾರ್ ಶಿವಣ್ಣ ಮತ್ತು ಹರ್ಷ ಕಾಂಬಿನೇಷನ್ ನಲ್ಲಿ ಬರುತ್ತಿರುವ ಮೂರನೇ ಚಿತ್ರವಿದು.


ಶಿವರಾಜ್ ಕುಮಾರ್ ಗೆ ನಾಯಕಿಯಾಗಿ ಭಾವನಾ ಅಭಿನಯಿಸುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಜೆ ಸ್ವಾಮಿ ಛಾಯಾಗ್ರಹಣ ಮತ್ತು ದೀಪು ಎಸ್ ಕುಮಾರ್ ಅವರ ಸಂಕಲನವಿದೆ. 


ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಬೆಂಗಳೂರಿನಲ್ಲಿ ಸಾಗುತ್ತಿದೆ. ಇನ್ನು 26 ದಿನಗಳ ಶೂಟಿಂಗ್ ಬಾಕಿಯಿದ್ದು ಬೇಸಿಗೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.