ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ಅಧಿಕಾರಿಗಳ ದಾಳಿ: ಇಂದು ಕೂಡ ವಿಚಾರಣೆ
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ಕೂಡ ವಿಚಾರಣೆಯನ್ನು ಮುಂದುವರಿಸಿದ್ದಾರೆ.

ಮಡಿಕೇರಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ಕೂಡ ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಕಳೆದ ರಾತ್ರಿ ರಶ್ಮಿಕಾ ಚೆನ್ನೈಯಿಂದ ಕೊಡಗು ಜಿಲ್ಲೆಯ ವೀರಾಜಪೇಟೆಯ ಕುಕ್ಲೂರು ಗ್ರಾಮದಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ್ದು, ಕೆಲ ಹೊತ್ತು ಅವರನ್ನು ಅಧಿಕಾರಿಗಳು ವಿಚಾರಣೆಗೆ ನಡೆಸಿದ್ದರು. ಬಳಿಕ ನಾಳೆ ವಿಚಾರಣೆ ನಡೆಸುವುದಾಗಿ ಹೇಳಿ, ಅಧಿಕಾರಿಗಳು ಮನೆಯಿಂದ ತೆರಳಿ ಸೆರೆನಿಟಿ ಹಾಲ್‌ನಲ್ಲಿ ವಾಸ್ತವ್ಯ ಹೂಡಿದ್ದರು.
ವಿರಾಜಪೇಟೆಯಲ್ಲಿ ಕುಕ್ಲೂರಲ್ಲಿ ಐಷಾರಾಮಿ ಬಂಗಲೆ, ಮೈತಾಡಿ ಗ್ರಾಮದಲ್ಲಿ ಮೂರು ಎಕರೆ ಕಾಫಿ ತೋಟ, ಬಿಟ್ಟಂಗಾಲದಲ್ಲಿ 5.50 ಎಕರೆ ಜಾಗ ಸೇರಿದಂತೆ ಕೋಟ್ಯಂತರ ರೂಪಾಯಿ ಆಸ್ತಿ ರಶ್ಮಿಕಾ ಮತ್ತು ಅವರ ತಂದೆಯ ಹೆಸರಿನಲ್ಲಿದೆ. ಆದರೆ ಇವುಗಳಿಗೆ ಸಮರ್ಪಕ ದಾಖಲೆಗಳನ್ನು ಒದಗಿಸಿರಲಿಲ್ಲ.
ಅಲ್ಲದೆ ರಶ್ಮಿಕಾ ತಂದೆ ಮದನ್ ಮಂಜಣ್ಣ ಪೆಟ್ರೋಲ್ ಬಂಕ್, ಶಾಲೆ ನಿರ್ಮಾಣಕ್ಕೆ ಯೋಚಿಸಿದ್ದರು. ವಿರಾಜಪೇಟೆಯಲ್ಲಿ ಸೆರಿನಿಟ್ ಹಾಲ್ ಹೆಸರಿನ ಐಷಾರಾಮಿ ಕಲ್ಯಾಣ ಮಂಟಪವಿದ್ದು ಇಲ್ಲಿನ ಒಂದು ದಿನದ ಬಾಡಿಗೆಯೇ ಒಂದೂವರೆ ಲಕ್ಷ ರೂಪಾಯಿ. ವರ್ಷದ ಹಿಂದೆಯಷ್ಟೇ ವಿರಾಜಪೇಟೆಯ ವಿಜಯನಗರದಲ್ಲಿರುವ ಮನೆಯನ್ನು ರಶ್ಮಿಕಾ ತಂದೆ ಒಂದೂವರೆ ಕೋಟಿ ರೂಪಾಯಿಗೆ ಮಾರಿದ್ದರು. ಇವುಗಳ ಬಗ್ಗೆ ಮಾಹಿತಿ ಪಡೆದಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಶ್ಮಿಕಾ ಅವರ ಅಭಿಮಾನಿಗಳ ಸೋಗಿನಲ್ಲಿ ಮನೆಗೆ ಬಂದು ಪರಿಶೀಲಿಸಿದ್ದರು.
ಚೆನ್ನೈಯಲ್ಲಿ ಶೂಟಿಂಗ್‌ನಲ್ಲಿದ್ದ ನಟಿಯನ್ನು ತಕ್ಷಣ ಬರುವಂತೆ ಮೆಮೊ ಕಳುಹಿಸಿ ಕರೆಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


