ಸಿನಿಮಾ ಸುದ್ದಿ

ರಾಬರ್ಟ್' ಚಿತ್ರದಲ್ಲಿ ಐಶ್ವರ್ಯ ಪ್ರಸಾದ್ ಪ್ರಮುಖ ಪಾತ್ರ

ಪಡ್ಡೆ ಹುಲಿ ಹಾಗೂ ಹಾರರ್ ಸಿನಿಮಾ ಶಾರ್ದೂಲದ ನಂತರ ಸ್ವಲ್ಪ ವಿರಾಮ ಪಡೆದುಕೊಂಡಿದ್ದ ನಟಿ ಐಶ್ವರ್ಯ ಪ್ರಸಾದ್ ಇದೀಗ ತರುಣ್ ಕಿಶೋರ್ ಸುಧೀರ್ ನಿರ್ದೇಶನದ, ದರ್ಶನ್ ನಾಯಕ ನಟನಾಗಿರುವ ರಾಬರ್ಟ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಬರ್ಟ್' ಚಿತ್ರದಲ್ಲಿ ಐಶ್ವರ್ಯ ಪ್ರಸಾದ್ ಪ್ರಮುಖ ಪಾತ್ರ
ಐಶ್ವರ್ಯ ಪ್ರಸಾದ್
Published On :

ಬೆಂಗಳೂರು:  ಪಡ್ಡೆ ಹುಲಿ ಹಾಗೂ ಹಾರರ್ ಸಿನಿಮಾ ಶಾರ್ದೂಲದ ನಂತರ ಸ್ವಲ್ಪ ವಿರಾಮ ಪಡೆದುಕೊಂಡಿದ್ದ ನಟಿ ಐಶ್ವರ್ಯ ಪ್ರಸಾದ್ ಇದೀಗ ತರುಣ್ ಕಿಶೋರ್ ಸುಧೀರ್ ನಿರ್ದೇಶನದ, ದರ್ಶನ್ ನಾಯಕ ನಟನಾಗಿರುವ ರಾಬರ್ಟ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಭಾನುವಾರ ಈ ಮಾಹಿತಿಯನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆದಾಗ್ಯೂ, ಅವರ ಪಾತ್ರದ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸಿಲ್ಲ.

ಉಮಾಪತಿ ಎಸ್ ಗೌಡ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಜಗಪತಿ ಬಾಬು, ವಿನೋದ್ ಪ್ರಭಾಕರ್, ಸೋನಾಲ್ ಮಾಂಟೆರೋ, ರವಿ ಕಿಶನ್, ಚಿಕ್ಕಣ್ಣ, ಶಿವರಾಜ್ ಕೆ.ಆರ್. ಪೇಟೆ ಮತ್ತಿತರ ತಾರಾಬಳಗವಿದೆ.

108 ದಿನಗಳ ಕಾಲ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಒಂದು ಹಾಡನ್ನು ಬಾಕಿ ಉಳಿಸಿಕೊಂಡಿದೆ. ಅದನ್ನು ವಿದೇಶದಲ್ಲಿ ಚಿತ್ರೀಕರಣ ಮಾಡಲು ನಿರ್ಧರಿಸಲಾಗಿದೆ. ಈ ಮಧ್ಯೆ ಸಂಗೀತ ಸಂಯೋಜನೆಗಾಗಿ ರಿ ರೆಕಾರ್ಡಿಂಗ್ ಪ್ರಕ್ರಿಯೆ ನಡೆಯುತ್ತಿದೆ. 

ಅರ್ಜುನ್ ಜನ್ಯಾ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ಏಪ್ರಿಲ್ 9 ರಂದು ಚಿತ್ರ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ.

ರಾಬರ್ಟ್ ಚಿತ್ರದ ನಿರ್ಮಾಣ ನಂತರದ ಕಾರ್ಯ ಸಾಗುತ್ತಿದೆ. ಪುದುಚೇರಿ, ಲಖನೌ, ಬೆಂಗಳೂರು, ಮೈಸೂರು, ಹೈದ್ರಾಬಾದ್, ಚೆನ್ನೈ, ಮತ್ತು ವಾರಾಣಸಿಯಲ್ಲಿ ಚಿತ್ರೀಕರಣ ಮಾಡಿರುವ ಈ ಚಿತ್ರಕ್ಕೆ ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣವಿದೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.