ಫೆಬ್ರವರಿ 10 ಕ್ಕೆ ನಿಖಿಲ್ ಕುಮಾರ್- ರೇವತಿ ನಿಶ್ಚಿತಾರ್ಥ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಟ ಸ್ಯಾಂಡಲ್‌ವುಡ್ ಜಾಗ್ವಾರ್ ನಿಖಿಲ್ ಕುಮಾರಸ್ವಾಮಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಟ ಸ್ಯಾಂಡಲ್‌ವುಡ್ ಜಾಗ್ವಾರ್ ನಿಖಿಲ್ ಕುಮಾರಸ್ವಾಮಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಶಾಸಕ ಲೇಔಟ್ ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿ ಅವರೊಂದಿಗೆ ಫೆ.10ಕ್ಕೆ ನಿಶ್ಚಿತಾರ್ಥ ನಡೆಯಲಿದ್ದು, ಏಪ್ರಿಲ್‌ನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ.
ಕೆಲವು ದಿನಗಳ ಹಿಂದೆ ನಿಖಿಲ್ ಕುಟುಂಬ ಜ್ಞಾನಭಾರತಿಯಲ್ಲಿರುವ ಹುಡುಗಿ ರೇವತಿ ಅವರ ಮನೆಗೆ ಹೋಗಿ ಹೆಣ್ಣು ನೋಡುವ ಶಾಸ್ತ್ರ ಮಾಡಿದ್ದರು. ಗುರುವಾರ ಕೃಷ್ಣಪ್ಪ ಕುಟುಂಬಸ್ಥರು ನಿಖಿಲ್ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ವಿವಾಹದ ಮಾತುಕತೆ ನಡೆಸಿದರು.
ಸಂಪ್ರದಾಯಗಳ ಪ್ರಕಾರ, ವಿವಾಹ ಕಾರ್ಯಕ್ರಮಗಳು ನಡೆಯಲಿವೆ. ಹುಡುಗಿ ಮನೆಯವರು ಇಂದು ನಮ್ಮಗೆ ಮನೆಗೆ ಬಂದಿದ್ದರು. ಸದ್ಯದಲ್ಲೇ ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕ ಹೇಳುತ್ತೇವೆ. ಬಹುಶಃ ಫೆ.10ಕ್ಕೆ ನಿಶ್ವಿತಾರ್ಯ ನಡೆಯಲಿದೆ. ಏಪ್ರಿಲ್‌ನಲ್ಲಿ ಮದುವೆ ನಿಗದಿಯಾಗಲಿದೆ.
ನಾವು ಮೊದಲಿನಿಂದಲೂ ದೇವರನ್ನು ಹಾಗೂ ಶಾಸ್ತ್ರ ಸಂಪ್ರದಾಯದ ಮೇಲೆ ನಂಬಿಕೆ ಇಟ್ಟುಕೊಂಡು ಬಂದವರು. ಪ್ರತಿಯೊಂದನ್ನು ಶಾಸ್ತ್ರೋಕ್ತವಾಗಿ ಮಾಡಬೇಕು ಎಂಬುದು ನಮ್ಮ ಅಭಿಲಾಷೆ. ಒಳ್ಳೆಯ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ನಿಶ್ಚಯಮಾಡಲಿದ್ದೇವೆ. ಶೀಘ್ರದಲ್ಲೇ ಸಂಪೂರ್ಣ ಮಾಹಿತಿ ನೀಡಲಿದ್ದೇವೆ' ಎಂದು ಕುಮಾರಸ್ವಾಮಿ ಹೇಳಿದರು
ಈ ಹಿಂದೆಯೇ ನಿಖಿಲ್ ಅವರಿಗೆ ನಿಶ್ಚಿತಾರ್ಥವಾಗಿ ಮುರಿದು ಬಿದ್ದಿತ್ತು. ಅದು ನಿರ್ಮಾಪಕ ಕೆ.ಸಿ.ಎನ್. ಮೋಹನ್ ಅವರ ಮಗಳೊಂದಿಗೆ ಆಗಿದ್ದ ನಿಶ್ಚಿತಾರ್ಥ ಕಾರಣಾಂತರಗಳಿಂದ ಮುರಿದುಬಿತ್ತು. ನಂತರ ಆಂಧ್ರದ ಉದ್ಯಮಿಯೊಬ್ಬರ ಮಗಳೊಂದಿಗೆ ನಿಖಿಲ್ ವಿವಾಹ ನಡೆಯಲಿದೆ ಎನ್ನೋ ಸುದ್ದಿ ಹಬ್ಬಿತ್ತು. ಅಲ್ಲದೆ ನಟಿ ರಚಿತಾ ರಾಮ್ ಹಾಗೂ ನಿಖಿಲ್ ಮದುವೆ ಸುದ್ದಿ ಸಹ ಗಾಸಿಪ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


