ತಮಿಳು ನಟ ವಿಶಾಲ್‌ಗೆ 45 ಲಕ್ಷ ರೂ ವಂಚನೆ: ಮಹಿಳೆ ವಿರುದ್ಧ ಪೊಲೀಸ್ ದೂರು ದಾಖಲು
ಮಹಿಳೆಯೊಬ್ಬರು ತಮಗೆ 45 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.

ಚೆನ್ನೈ: ಮಹಿಳೆಯೊಬ್ಬರು ತಮಗೆ 45 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.
ಹೌದು.. ವಿಶಾಲ್ ಹೀರೋ ಮಾತ್ರವಲ್ಲ, ನಿರ್ಮಾಪಕರೂ ಹೌದು. ವಿಶಾಲ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ನಲ್ಲಿ ಹಲವು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ವಿಶಾಲ್ ಅವರ ಸಿನಿಮಾ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಕಳೆದ ಆರು ವರ್ಷಗಳಲ್ಲಿ 45 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ವಿಶಾಲ್ ಅವರ ಮ್ಯಾನೇಜರ್ ಹರಿ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಸದ್ಯ ಪೊಲೀಸರು ಆ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ನಟ ವಿಶಾಲ್ ಕಳೆದ ಏಳು ವರ್ಷಗಳಿಂದ ಎಂಟು ಚಿತ್ರಗಳನ್ನು ನಿರ್ಮಾಣ ಮಾಡಿದ್ದು, ಸದ್ಯ ವಿಶಾಲ್ ಚಕ್ರ ಈ ಚಿತ್ರದಲ್ಲಿ ನಟಿಸುತ್ತಿದ್ದು, ಇದರ ಟೀಸರ್ ಬಿಡುಗಡೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


