ಉಸಿರಾಟದ ತೊಂದರೆ: ಹಿರಿಯ ನಟಿ ಜಯಂತಿ ವಿಕ್ರಂ ಆಸ್ಪತ್ರೆಗೆ ದಾಖಲು
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಅವರನ್ನು ಪುತ್ರ ಕೃಷ್ಣ ಕುಮಾರ್ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದ್ದಾರೆ

ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಅವರನ್ನು ಪುತ್ರ ಕೃಷ್ಣ ಕುಮಾರ್ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿಕ್ರಮ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ. ಕೆ ಎಸ್ ಸತೀಶ್ ಮತ್ತು ತಂಡ ನಟಿ ಜಯಂತಿ ಅವರನ್ನು ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಎಚ್ಚರದಿಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಹೀಗೆ ಎರಡು ವರ್ಷಗಳ ಹಿಂದೆ ಅರ್ಥಾತ್ 2018ರ ಮಾರ್ಚ್ ತಿಂಗಳಲ್ಲಿಯೂ ಇದೇ ರೀತಿ ಅಸ್ತಮಾ ಉಲ್ಬಣಿಸಿ ಉಸಿರಾಟದ ತೊಂದರೆ ಎದುರಾಗಿತ್ತು. ಆಗಲೂ ಜಯಂತಿ ಅವರನ್ನು ವಿಕ್ರಮ್ ಆಸ್ಪತ್ರೆಯಲ್ಲೇ ವೈದ್ಯರಾದ ಡಾ. ಸತೀಶ್ ಅವರೇ ಚಿಕಿತ್ಸೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


