ಸಿನಿಮಾ ಸುದ್ದಿ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು
ರಾಕ್ ಲೈನ್ ವೆಂಕಟೇಶ್,
Published On :

ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್ ಲೈನ್ ವೆಂಕಟೇಶ್ ಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನು ಇದರಿಂದ ಯಾರ್ಯಾರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ ಎಲ್ಲರನ್ನು ಕಾಡತೊಡಗಿದೆ.

ಸದ್ಯ ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ ಅಂಬರೀಶ್ ಅವರಿಗೆ ಸೋಮವಾರ ಕೊರೋನಾ ಸೋಂಕು ತಗುಲಿರುವ ವರದಿ ಬಂದ ನಂತರ ರಾಕ್ ಲೈನ್ ವೆಂಕಟೇಶ್ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸೋಂಕು ಧೃಢಪಟ್ಟ ಹಿನ್ನೆಲೆಯಲ್ಲಿ ರಾಕ್ ಲೈನ್ ವೆಂಕಟೇಶ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರoತೆ. ಎಲ್ಲೆಲ್ಲೂ ಕೊರೋನಾ ರುದ್ರನರ್ತನ ನಡೆಯುತ್ತಿದ್ದು, ಚಿತ್ರೋದ್ಯಮದ ಮಂದಿಗಳು ಚಿಂತೆಗೀಡಾಗಿದ್ದಾರೆ.

ಈಗಾಗಲೇ ಕೆಲವು ಚಿತ್ರಗಳ ಚಿತ್ರೀಕರಣ ನಡೆಯುತ್ತಿದ್ದು , ಇದರ ನಡುವೆಯೇ ಸೋಂಕು ಹರಡುವ ಸುದ್ದಿಯಿಂದ ಮುಂದೇನು ಎಂಬ ಆತಂಕ ಎಲ್ಲರಲ್ಲೂ ಮನೆಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.