ರಾಮ್ ಧುಲಿಪುಡಿ ನಿರ್ದೇಶನದಲ್ಲಿ ಸೆಂಚುರಿ ಸ್ಟಾರ್ ಶಿವಣ್ಣ, ಚಿತ್ರಕ್ಕೆ ಅಧಿಕೃತ ಚಾಲನೆ
ಶಿವರಾಜ್‌ಕುಮಾರ್ ಅಭಿನಯದ ರಾಮ್ ಧುಲಿಪುಡಿಯ ನಿರ್ದೇಶನದ ಚಿತ್ರ ಸೆಟ್ಟೇರುವುದು ಪಕ್ಕಾ ಆಗಿದೆ. ಶಿವಣ್ಣನ ಜನ್ಮದಿನವಾದ ಭಾನುವಾರ (ಜುಲಯ್ 12) ದಂದು ಚಿತ್ರದ ಸ್ಕ್ರಿಪ್ಟ್ ಪೂಜೆ ನೆರವೇರಿದೆ.

ಶಿವರಾಜ್‌ಕುಮಾರ್ ಅಭಿನಯದ ರಾಮ್ ಧುಲಿಪುಡಿಯ ನಿರ್ದೇಶನದ ಚಿತ್ರ ಸೆಟ್ಟೇರುವುದು ಪಕ್ಕಾ ಆಗಿದೆ. ಶಿವಣ್ಣನ ಜನ್ಮದಿನವಾದ ಭಾನುವಾರ (ಜುಲಯ್ 12) ದಂದು ಚಿತ್ರದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಈ ಸಂದರ್ಭದಲ್ಲಿ ತಂಡವು ಫಸ್ಟ್ ಲುಕ್ ಪೋಸ್ಟರ್ ಅನ್ನು ಸಹ ಬಹಿರಂಗಪಡಿಸಿದ್ದು ವಿಶೇಷವಾಗಿತ್ತು. ಬಾಲಶ್ರೀರಾಮ್ ಸ್ಟುಡಿಯೋಸ್ ಪ್ರಸ್ತುತಪಡಿಸಿದ ಈ ಚಿತ್ರವು ಲವ್ ಆಕ್ಷನ್-ಡ್ರಾಮಾ ಆಗಿದೆ. ಶಿವರಾಜ್‌ಕುಮಾರ್ ಈ ಚಿತ್ರದಲ್ಲಿ ಸೇನಾಧಿಕಾರಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ
ಸಧ್ಯ ಇನ್ನೂ ಹೆಸರಿಡದ ಈ ಚಿತ್ರವನ್ನು ಪ್ರೊಡಕ್ಷನ್ ನಂ 1 ಎಂದು ಕರೆಯಲಾಗಿದೆ, ಈ ಹಿಂದೆ ದಿಲ್ ರಾಜು ನಿರ್ಮಿಸಿದ ಚಿತ್ರಗಳಲ್ಲಿ ಕೆಲಸ ಮಾಡಿದ ನಿರ್ದೇಶಕ ಈ ಚಿತ್ರದ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ. ದೆ. ಈ ಚಿತ್ರವನ್ನು ಸ್ವಾತಿ ವನಪಲ್ಲಿ, ಶ್ರೀಕಾಂತ್ ಧುಲಿಪುಡಿ ಮತ್ತು ವರಾಲಾಶ್ರೀನಿವಾಸ್ ರೆಡ್ಡಿ ನಿರ್ಮಿಸಲಿದ್ದು, ಸಹಪುಡಿ ವಿಜಯಕುಮಾರ್ ಸಹ-ನಿರ್ಮಾಪಕರಾಗಿದ್ದಾರೆ.
ಮ್ಯೂಸಿಕ್ ಡೈರೆಕ್ಟರ್ ಶ್ರೀಚರಣ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು ರವಿ ಕುಮಾರ್ ಸನಾ ಛಾಯಾಗ್ರಹಣ ಚಿತ್ರಕ್ಕೆ ಇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


