ನಟ, ನಿರ್ದೇಶಕ ಜೋಗಿ ಪ್ರೇಮ್ ಗೆ ಮಾತೃ ವಿಯೋಗ
ನಟ, ನಿರ್ದೇಶಕ ಜೋಗಿ ಪ್ರೇಮ್ ಅವರ ತಾಯಿ ಭಾಗ್ಯಮ್ಮ (75) ನಿಧನರಾಗಿದ್ದಾರೆ, ಭಾಗ್ಯಮ್ಮ ಕೆಲವು ತಿಂಗಳಿನಿಂದ ಲ್ಯುಕೇಮಿಯಾ ಕ್ಯಾನ್ಸರ್ ನಿಂದ (ರಕ್ತಕ್ಯಾನ್ಸರ್) ಬಳಲುತ್ತಿದ್ದರು.

ಬೆಂಗಳೂರು: ನಟ, ನಿರ್ದೇಶಕ ಜೋಗಿ ಪ್ರೇಮ್ ಅವರ ತಾಯಿ ಭಾಗ್ಯಮ್ಮ (75) ನಿಧನರಾಗಿದ್ದಾರೆ, ಭಾಗ್ಯಮ್ಮ ಕೆಲವು ತಿಂಗಳಿನಿಂದ ಲ್ಯುಕೇಮಿಯಾ ಕ್ಯಾನ್ಸರ್ ನಿಂದ (ರಕ್ತಕ್ಯಾನ್ಸರ್) ಬಳಲುತ್ತಿದ್ದರು.
ಹೀಗಾಗಿ ಬೆಂಗಳೂರಿನ ಜಯನಗರದ ಶಾಂತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ್ ಅವರ ತಾಯಿಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಅತ್ತೆ ಭಾಗ್ಯಮ್ಯ ಅವರ ನಿಧನದ ಸುದ್ದಿಯನ್ನು ರಕ್ಷಿತಾ ಪ್ರೇಮ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಭಾಗ್ಯಮ್ಮ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದು, ವರದಿ ನೆಗೆಟಿವ್ ಬಂದಿದೆ. ಇಂದು ಮಂಡ್ಯದ ಬೆಸಗರಹಳ್ಳಿ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ
ಮಾಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


