ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಕೊರೋನಾದಿಂದ ಸಾವು

ಸ್ಯಾಂಡಲ್ ವುಡ್ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ (70) ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಸ್ಯಾಂಡಲ್ ವುಡ್ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಕೊರೋನಾದಿಂದ ಸಾವು
ಹುಲಿವಾನ್ ಗಂಗಾಧರಯ್ಯ
Published On :

ಸ್ಯಾಂಡಲ್ ವುಡ್ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ (70) ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಉಸಿರಾಟದ ಸಮಸ್ಯೆ ಇದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.

ರಂಗಭೂಮು ಹಿನ್ನೆಲೆಯಿಂದ ಬಂದಿದ್ದ ಗಂಗಾಧರಯ್ಯ ಸುಮಾರು 118 ಸಿನಿಮಾ ಮತ್ತು , 1500 ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದರು. ಕುರಿಗಳು ಸರ್ ಕುರಿಗಳು, ನೀರ್ ದೋಸೆ, ಅಪ್ಪು, ಕ್ವಾಟ್ಲೆ ಸತೀಶ, ಕರ್ವ, ಶಬ್ದವೇಧಿ ಸೇರಿ ಅನೇಕ ಸಿನಿಮಾಗಳಲ್ಲಿ ಗಂಗಾಧರಯ್ಯ ಪೋಷಕ ಪಾತ್ರ ನಿರ್ವಹಿಸಿದ್ದರು.

ಪ್ರಸ್ತುತ ಜನಪ್ರಿಯ ಟಿವಿ ಧಾರಾವಾಹಿ "ಪ್ರೇಮಲೋಕ: ದಲ್ಲಿ ಅಭಿನಯಿಸುತ್ತಿದ್ದ ಗಂಗಾಧರಯ್ಯನವರಿಗೆ ಶೂಟಿಂಗ್ ನಲ್ಲಿದ್ದಾಗಲೇ ಜ್ವರ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.