ಕೆರಳಿದ ಪವನ್ ಕಲ್ಯಾಣ್ ಫ್ಯಾನ್, ರಾಮಗೋಪಾಲ್ ವರ್ಮಾ ಕಚೇರಿ ಧ್ವಂಸ!
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳು ರೊಚ್ಚಿಗೆದಿದ್ದು ತೆಲುಗಿನ ಖ್ಯಾತ ನಿರ್ದೇಶಕ ರಾಮಗೋಪಾಲ್ ವರ್ಮಾ ಅವರ ಕಚೇರಿಯನ್ನು ಧ್ವಂಸ ಮಾಡಿದ್ದಾರೆ.

ಹೈದರಾಬಾದ್: ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳು ರೊಚ್ಚಿಗೆದಿದ್ದು ತೆಲುಗಿನ ಖ್ಯಾತ ನಿರ್ದೇಶಕ ರಾಮಗೋಪಾಲ್ ವರ್ಮಾ ಅವರ ಕಚೇರಿಯನ್ನು ಧ್ವಂಸ ಮಾಡಿದ್ದಾರೆ.
ಚಲನಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ತಮ್ಮ ಹೊಸ ಚಿತ್ರದ ಮೂಲಕ ಟಾಲಿವುಡ್ ನಟ ಪವನ್ ಕಲ್ಯಾಣ್ ಅವರ ಅಭಿಮಾನಿಗಳನ್ನು ಕೆರಳಿಸಿದ್ದಾರೆ. ರೊಚ್ಚಿಗೆದ್ದ ಅಭಿಮಾನಿಗಳ ಗುಂಪು ಕಲ್ಲು ತೂರಾಟ ನಡೆಸಿ ವರ್ಮಾ ಅವರ ಕಚೇರಿಯ ಕಿಟಕಿ ಫಲಕಗಳನ್ನು ಹೊಡೆದು ಹಾಕಿದ್ದಾರೆ.
ಪವನ್ ಕಲ್ಯಾಣ್ ಅವರ ಜೀವನ ಮತ್ತು ಅವರ ವಿಫಲ ರಾಜಕೀಯ ಜೀವನವನ್ನು ಆಧರಿಸಿ ವರ್ಮಾ ಅವರ ವಿಡಂಬನಾತ್ಮಕ "ಪವರ್ ಸ್ಟಾರ್" ಚಿತ್ರ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.
ತಮ್ಮ ಅಧಿಕೃತ ವೆಬ್‌ಸೈಟ್ ಆರ್‌ಜಿವಿ ವರ್ಲ್ಡ್ ನಲ್ಲಿ ಬಿಡುಗಡೆ ಮಾಡುವುದಾಗಿ ವರ್ಮಾ ಘೋಷಿಸಿದಾಗಿನಿಂದಲೂ ಪವನ್ ಅಭಿಮಾನಿಗಳು ವರ್ಮಾ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ದೂಷಿಸುತ್ತಿದ್ದಾರೆ.
ದಾಳಿಯ ನಂತರ ಚಿತ್ರದ ನಿರ್ಮಾಪಕರು ನಗರದ ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ವರದಿಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ವಶಕ್ಕೆ ಪಡೆಯಲಾಗಿದೆ.
ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ವರ್ಮಾ ಅವರು "ಇದು ಪ್ರಜಾಪ್ರಭುತ್ವ ದೇಶ. ಇಲ್ಲಿ ಸಿನಿಮಾ ಮಾಡುವ ಹಕ್ಕಿದೆ. ಇದು ಕಾಲ್ಪನಿಕ ಸಿನಿಮಾವಾಗಿದ್ದು ಯಾರಿಗೂ ಸಂಬಂಧಿಸಿಲ್ಲ ಎಂದು ನಾನು ಹೇಳುತ್ತಲೆ ಬಂದಿದ್ದೇನೆ. ಆದರೆ ಅವರಿಗೆ ಅದು ಅರ್ಥವಾಗುತ್ತಿಲ್ಲ. ನನ್ನ ಪ್ಲಾಟ್‌ಫಾರ್ಮ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


