ಎಸ್ ಎಸ್ ರಾಜಮೌಳಿಯ #RRR ಸಿನಿಮಾ ಸೋತರೆ, ಬೀದಿಗಿಳಿದು ಸಂಭ್ರಮ: ಆರ್ ಜಿವಿ
ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಬಹು ನಿರೀಕ್ಷಿತ ಚಿತ್ರ #RRR ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸೋತರೆ ಬೀದಿಗಿಳಿದು ಪಟಾಕಿ ಹೊಡೆದು ಸಂಭ್ರಮಿಸಲಾಗುತ್ತದೆ ಎಂದು ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.

ಹೈದರಾಬಾದ್: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಬಹು ನಿರೀಕ್ಷಿತ ಚಿತ್ರ #RRR ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸೋತರೆ ಬೀದಿಗಿಳಿದು ಪಟಾಕಿ ಹೊಡೆದು ಸಂಭ್ರಮಿಸಲಾಗುತ್ತದೆ ಎಂದು ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ ಗೋಪಾಲ್ ವರ್ಮಾ, ಸಿನಿಮಾ ಇಂಡಸ್ಟ್ರಿಯಲ್ಲಿ ಎಲ್ಲರೂ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಎಂದು ಹೇಳಿಕೊಳ್ಳುತ್ತಾರೆ. ಆದರೆ ಮಾನಸಿಕವಾಗಿ ಯಾರೂ ಈ ಮಾತನ್ನು ಹೇಳುವುದಿಲ್ಲ. ತಮ್ಮ ಸಿನಿಮಾ ಗೆಲುವಿಗಿಂತೆ ಬೇರೆಯ ಸಿನಿಮಾ ಸೋಲನ್ನೇ ಹೆಚ್ಚಾಗಿ ಸಂಭ್ರಮಿಸುತ್ತಾರೆ ಎಂದು ಹೇಳಿದ್ದಾರೆ.
ಆರ್ಜಿವಿ ತಮ್ಮ ನಿರ್ದೇಶನದ ನೀಲಿ ತಾರೆ ಮಿಯಾ ಮಲ್ಕೋವಾ ಮುಖ್ಯಭೂಮಿಕೆಯಲ್ಲಿರುವ 'ಕ್ಲೈಮ್ಯಾಕ್ಸ್' ಚಿತ್ರದ ಆನ್ಲೈನ್ ಸಂದರ್ಶನವೊಂದರಲ್ಲಿ ರಾಜಮೌಳಿ ಸಿನಿಮಾ ಬಗ್ಗೆ ಮಾತನಾಡಿದ್ದು, #RRR ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸೋತರೆ ಬೀದಿಗಿಳಿದು ಪಟಾಕಿ ಹೊಡೆದು ಸಂಭ್ರಮಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದು ನನ್ನ ಮಾತಲ್ಲ, ಎಲ್ಲ ನಿರ್ದೇಶಕರು, ಸಿನಿಮಾ ಕಲಾವಿದರು ಹೇಳಿಕೊಳ್ಳುವ ಮಾತದು. ತೆಲುಗು ಸಿನಿಮಾ ರಂಗದಲ್ಲಿ ರಾಜಮೌಳಿಯಷ್ಟು ಯಶಸ್ಸನ್ನು ಯಾರೂ ಪಡೆದಿಲ್ಲ. ರಾಜಮೌಳಿಯ ಯಶಸ್ಸನ್ನು ಸಹಿಸದ ನಿರ್ಮಾಪಕರು, ನಿರ್ದೇಶಕರು, ಕಲಾವಿದರು ಇಂಡಸ್ಟ್ರಿಯಲ್ಲಿ ಸಾಕಷ್ಟು ಜನರಿದ್ದಾರೆ. ಸರಣಿ ಸೂಪರ್ ಹಿಟ್ ಸಿನಿಮಾ ನೀಡಿರುವ ಅವರ ಕೆಲಸವನ್ನು, ಪಾಪ್ಯುಲಾರಿಟಿಯನ್ನು ಕಂಡು ಹೊಟ್ಟೆಕಿಚ್ಚು ಪಡುವವರೇ ಹೆಚ್ಚು. ಅವರ ಆ ಯಶಸ್ಸನ್ನು ಕೆಲವರಿಗೆ ಅರಗಿಸಿಕೊಳ್ಳಲು ಆಗುವುದಿಲ್ಲ. ಒಂದು ವೇಳೆ #ಆರ್ಆರ್ಆರ್ ಸಿನಿಮಾ ಸೋತರೆ, ರಸ್ತೆಗಿಳಿದು, ಕೈಯಲ್ಲಿ ಶಾಂಪೇನ್ ಹಾರಿಸಿ ಸಂಭ್ರಮಿಸುವವರೇ ಹೆಚ್ಚಿದ್ದಾರೆ. ಇದೇ ವಾಸ್ತವ!' ಎಂದು ಹೇಳಿದ್ದಾರೆ.
ಇನ್ನು ಆರ್ ಜಿವಿ ಹೇಳಿಕೆ ಇದೀಗ ಭಾರಿ ವೈರಲ್ ಆಗುತ್ತಿದ್ದು, ತೆಲುಗು ಸಿನಿರಂಗದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


