ಎರಡು ದಿನ ಸೋಶಿಯಲ್ ಮೀಡಿಯಾ ಓಪನ್ ಮಾಡಲು ಹಿಂಜರಿದೆ: ಅನುಶ್ರೀ
ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣ ನೋಡಲು ನಾನು ಹಿಂಜರಿದಿದ್ದೆ. ಸುದ್ದಿ ನೋಡಲು ಭಯವಾಗುತ್ತಿತ್ತು ಎಂದು ಸ್ಯಾಂಡಲ್ ವುಡ್ ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ.

ಬೆಂಗಳೂರು: ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣ ನೋಡಲು ನಾನು ಹಿಂಜರಿದಿದ್ದೆ. ಸುದ್ದಿ ನೋಡಲು ಭಯವಾಗುತ್ತಿತ್ತು ಎಂದು ಸ್ಯಾಂಡಲ್ ವುಡ್ ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ.
ತೀವ್ರ ಹೃದಯಾಘಾತದಿಂದ ಭಾನುವಾರ ಕೊನೆಯಿಸಿರೆಳೆದಿದ್ದ ನಟ ಚಿರಂಜೀವಿ ಸರ್ಜಾ ಅವರ ಜೊತೆಗಿನ ಗ್ರೂಪ್ ಪೋಟೋ ಒಂದನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ, ಈ ಎರಡು ದಿನ ಸೋಶಿಯಲ್ ಮೀಡಿಯಾ ಓಪನ್ ಮಾಡಲು ಹಿಂಜರಿದೆ. ನ್ಯೂಸ್ ನೋಡಲು ಅಂಜಿದೆ. ಕಾರಣ ಚಿರ ನಿದ್ರೆಗೆ ಜಾರಿದ ಚಿರು ನೋಡಲು ಆಗದೆ. ದೇವರ ಆಟ ಬಲ್ಲವರಾರು. ಹೌದು ಆದರೆ, ಈ ಆಟಗಾರ ಬಹಳ ಬೇಗ ಅಗಲಿದ. ಸದಾ ನಗುವ ನಗಿಸುವ, ಕಿಂಚಿತ್ತೂ ಬೇರೆಯವರ ಬಗ್ಗೆ ಅಸೂಯೆ ಪಡದ ಚಿರುವನ್ನು ಆ ಬಾಕ್ಸ್ ನಲ್ಲಿ ನೋಡಿದಾಗ ವಿವರಿಸಲಾಗದ ಸಂಕಟ ಎಂದು ಬರೆದುಕೊಂಡಿದ್ದಾರೆ.
ಜೊತೆಗೆ, ಈಗ ಎಲ್ಲೆಡೆ ಹಾಗೆ ಮಾಡಿದ್ದರೆ ಹೀಗೆ ಆಗುತಿತ್ತು ಹೀಗೆ ಮಾಡಬೇಕಿತ್ತು ಅನ್ನೋ ನೂರಾರು ಊಹಾಪೋಹಗಳು. ಆದರೆ, ಅವನನ್ನು ಅರಿತವರು ಈ ಭಾವಚಿತ್ರದಲ್ಲಿರೋ ಗೆಳೆಯರೆಲ್ಲರಿಗೂ ಗೊತ್ತು ಆತ ಎಷ್ಟು ಕೂಲ್ ಹುಡುಗ ಅಂತ. ಯಾವ ಕಾರಣಗಳು ಅವನನ್ನು ಮತ್ತೆ ತರಲು ಸಾಧ್ಯವೇ? ಅವನ ಆತ್ಮಕ್ಕೆ ಶಾಂತಿ ಸಿಗಲಿ. ಮೇಘನಾ ಹಾಗೂ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಆ ದೇವರು ಧೈರ್ಯ ಕೊಡಲಿ. ದೇವರೇ ಇನ್ನೆಂದು ಇಂತ ಸ್ನೇಹ ಜೀವಿಯನ್ನು ಇಷ್ಟು ಬೇಗ ಕರೆಯಬೇಡ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


