ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಗೆ ಸಿಹಿ ಸುದ್ದಿ: ಚಲನಚಿತ್ರ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ

ರಾಜ್ಯದಲ್ಲಿ ಅನ್ ಲಾಕ್ 1.0 ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಲನಚಿತ್ರ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಗೆ ಅನುಮತಿ ನೀಡುವ ಮೂಲಕ ಸ್ಯಾಂಡಲ್ ವುಡ್ ಗೆ ಸಿಹಿ ಸುದ್ದಿ ನೀಡಿದೆ.

ಸ್ಯಾಂಡಲ್ ವುಡ್ ಗೆ ಸಿಹಿ ಸುದ್ದಿ: ಚಲನಚಿತ್ರ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್ 1.0 ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಲನಚಿತ್ರ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಗೆ ಅನುಮತಿ ನೀಡುವ ಮೂಲಕ ಸ್ಯಾಂಡಲ್ ವುಡ್ ಗೆ ಸಿಹಿ ಸುದ್ದಿ ನೀಡಿದೆ.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಆದಾಗಿನಿಂದ ಚಲನಚಿತ್ರ ಚಿತ್ರೀಕರಣಕ್ಕೆ ಪೂರ್ಣ ವಿರಾಮ ನೀಡಲಾಗಿತ್ತು. ಇತ್ತೀಚೆಗೆ ಸರ್ಕಾರ ಕಿರುತೆರೆ ಚಿತ್ರೀಕರಣಕ್ಕೆ ಅನುಮತಿ‌ ನೀಡಿತ್ತು. ಇದೀಗ ಚಲನಚಿತ್ರ ಚಿತ್ರೀಕರಣಕ್ಕೂ ಅನುಮತಿ ನೀಡಿದೆ.

ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದೆಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡು‌ ಚಲನಚಿತ್ರ ಸೇರಿ ಧಾರವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಇನ್ನು ಕೊವಿಡ್-19 ಸಂಬಂಧವಾಗಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.