ಫ್ಯಾಮಿಲಿ ಪ್ಯಾಕ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ
ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ‘ಫ್ಯಾಮಿಲಿ ಪ್ಯಾಕ್’ ಚಿತ್ರದ ಮೊದಲ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ಬೆಂಗಳೂರು: ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ‘ಫ್ಯಾಮಿಲಿ ಪ್ಯಾಕ್’ ಚಿತ್ರದ ಮೊದಲ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.
ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ ಈ ಚಿತ್ರದ ನಿರ್ಮಾಪಕರು. ಮನರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.
ಈ ಹಿಂದೆ ಸಂಕಷ್ಟಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ ಅರ್ಜುನ್ ಕುಮಾರ್ ಎಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಸಂಕಷ್ಟಕರ ಗಣಪತಿ ಚಿತ್ರದ ನಾಯಕ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿದ್ದಾರೆ.
ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸಲಿದ್ದು, ತಾರಾಬಳಗದಲ್ಲಿ ರಂಗಾಯಣ ರಘು, ಅಚ್ಯುತಕುಮಾರ್, ದತ್ತಣ್ಣ, ತಿಲಕ್, ನಾಗಭೂಷಣ್ ಮುಂತಾದವರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


