ಅಯ್ಯಪ್ಪನುಂ-ಕೋಶಿಯುಂ ಮಲಯಾಳಂ ಸಿನಿಮಾ ನಿರ್ದೇಶಕ ಸಚ್ಚಿ ಇನ್ನಿಲ್ಲ
ಮಲಯಾಳಂ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಕೆ. ಆರ್.ಸಚ್ಚಿದಾನಂದ್ ಅಲಿಯಾಸ್ ಸಚ್ಚಿ ಜೂನ್ 18ರಂದು ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚ್ಚಿ ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ, ಮತ್ತೊಮ್ಮೆ ತೀವ್ರ ಹೃದಯ ಸ್ತಂಬನವಾಗಿ ಮೃತಪಟ್ಟಿದ್ದಾರೆ.

ತ್ರಿಶೂರ್: ಮಲಯಾಳಂ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಕೆ. ಆರ್.ಸಚ್ಚಿದಾನಂದ್ ಅಲಿಯಾಸ್ ಸಚ್ಚಿ ಜೂನ್ 18ರಂದು ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚ್ಚಿ ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ, ಮತ್ತೊಮ್ಮೆ ತೀವ್ರ ಹೃದಯ ಸ್ತಂಬನವಾಗಿ ಮೃತಪಟ್ಟಿದ್ದಾರೆ.
ಅಯ್ಯಪ್ಪನುಂ-ಕೋಶಿಯುಂ ಎಂಬ ಸೂಪರ್ ಹಿಟ್ ಚಿತ್ರವಲ್ಲದೆ ಅನಾರ್ಕಲಿ ಎಂಬ ಪ್ರೇಮ ಕಥೆಯನ್ನು ನಿರ್ದೇಶಿಸಿದ್ದರು. ಸಮಾಜಕ್ಕೆ ಸಂದೇಶ ಸಾರುವ ಡ್ರೈವಿಂಗ್ ಲೈಸನ್ಸ್ ಕೂಡಾ ಸಚ್ಚಿಯ ಕೈಚಳಕ ಹೊಂದಿತ್ತು. ಹೃದಯಸ್ಪರ್ಶಿ ಕಥೆಗಾರ, ನಿರ್ದೇಶಕ ಸಚ್ಚಿದಾನಂದ ಇನ್ನು ನೆನಪು ಮಾತ್ರ ತ್ರಿಶೂರಿನ ಜ್ಯುಬಿಲಿ ಮಿಷನ್ ಆಸ್ಪತ್ರೆಯಲ್ಲಿ ನಿಧನರಾದ 48 ವರ್ಷ ವಯಸ್ಸಿನ ಸಚ್ಚಿ ಅವರು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ವಕೀಲ, ಕವಿ, ರಂಗಭೂಮಿ ಕಲಾವಿದ, ಕಥೆಗಾರ, ಸಂಭಾಷಣೆಗಾರ, ನಿರ್ದೇಶಕ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಸಚ್ಚಿ ಬಹುಮುಖ ಪ್ರತಿಭೆಯಾಗಿದ್ದರು. ಕೇರಳ ಹೈಕೋರ್ಟಿನಲ್ಲಿ 8 ವರ್ಷಗಳ ಕಾಲ ಕ್ರಿಮಿನಲ್ ಲಾಯರ್ ಆಗಿದ್ದರು. ಎರಡು ಮೂರು ದಿನಗಳ ಹಿಂದೆ ಸೊಂಟದ ಭಾಗದಲ್ಲಿ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ, ನಂತರ ಚೇತರಿಸಿಕೊಳ್ಳಲಿಲ್ಲ ಎಂದು ತಿಳಿದು ಬಂದಿದೆ.
ಸಚ್ಚಿ ಅವರ ಮೆದುಳಿಗೂ ರಕ್ತ ಪೂರೈಕೆ ಸ್ಥಗಿತವಾಗಿ ಸಮಸ್ಯೆ ಎದುರಾಗಿತ್ತು. ಕಳೆದೆರಡು ದಿನಗಳಿಂದ ವೆಂಟಿಲೇಟರ್ ನೆರವಿನಲ್ಲಿ ಉಸಿರಾಟ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


