ಯೂಟ್ಯೂಬ್ ನಿಂದ ಡಿಲೀಟ್ ಆಗಿದ್ದ ಕೋಟಿಗೊಬ್ಬ-3 ಟೀಸರ್ ಇಂದಿನಿಂದ ಲಭ್ಯ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೆ ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ ಈಗ ಸಂಕಷ್ಟದಲ್ಲಿ ಸಿಲುಕಿದೆ. ಹೌದು, ಕೋಟಿಗೊಬ್ಬ-3 ಚಿತ್ರದ ಟೀಸರ್ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿತ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೆ ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ ಈಗ ಸಂಕಷ್ಟದಲ್ಲಿ ಸಿಲುಕಿದೆ. ಹೌದು, ಕೋಟಿಗೊಬ್ಬ-3 ಚಿತ್ರದ ಟೀಸರ್ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿತ್ತು.
ಆದರೆ ಸೋಮವಾರದಿಂದ ಯೂಬ್ಯೂನಲ್ಲಿ ಲಭ್ಯವಾಗಲಿದೆ ಎಂದು ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.
ದಿಢೀರನೆ ಚಿತ್ರದ ಟೀಸರ್ ಡಿಲೀಟ್ ಆಗಿರುವುದು ನೋಡಿ ಚಿತ್ರತಂಡ ಮತ್ತು ಅಭಿಮಾನಿಗಳು ಶಾಕ್ ಆಗಿತ್ತು. ಚಿತ್ರತಂಡ ಭಾಕಿ ಹಣಕೊಟ್ಟಿಲ್ಲ ಎನ್ನುವ ಕಾರಣಕ್ಕೆ ಅಜಯ್ ಪಾಲ್ ಟೀಸರ್ ಡಿಲೀಟ್ ಮಾಡಿಸಿದ್ದಾರಂತೆ. ಪೋಲೆಂಡ್ ನಲ್ಲಿ ಚಿತ್ರೀಕರಿಸಲಾದ ದೃಶ್ಯಗಳು ಅಜಯ್ ಪಾಲ್ ಮತ್ತು ಸಂಜಯ್ ಪಾಲ್ ಕಂಪೆನಿ ಹೆಸರಿನಲ್ಲಿದೆ.
ಭಾಕಿ ಹಣ ನೀಡದೆ ಟೀಸರ್ ರಿಲೀಸ್ ಮಾಡಲಾಗಿದೆ ಎನ್ನುವ ಕಾರಣಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿದ್ದ ಟೀಸರ್ ಅನ್ನು ಡಿಲೀಟ್ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಭಾಕಿ ಹಣ ಕೊಡುವವರೆಗೂ ಪೋಲೆಂಡ್ ನಲ್ಲಿ ಚಿತ್ರೀಕರಿಸಲಾದ ದೃಶ್ಯಗಳನ್ನು ನೀಡುವುದಲಿಲ್ಲ ಎಂದು ಅಜಯ್ ಪಾಲ್ ಎಚ್ಚರಿಕೆ ಕೂಡ ನೀಡಿದ್ದಾರಂತೆ. ಈ ಮೊದಲು, ಪೋಲೆಂಡ್ ನಲ್ಲಿ ಚಿತ್ರೀಕರಣಕ್ಕೆ ಹೋದ ಸಮಯದಲ್ಲೂ ಚಿತ್ರತಂಡಕ್ಕೆ ದೊಡ್ಡ ಸಮಸ್ಯೆ ಎದುರಾಗಿತ್ತು.
ಚಿತ್ರತಂಡ 50 ಲಕ್ಷ ಹಣಕೊಡಬೇಕು ಎಂದು ಅಜಯ್ ಪಾಲ್ ಬೇಡಿಕೆ ಇಟ್ಟಿದ್ದರು. ಇದಕ್ಕೆ ಒಪ್ಪದ ಚಿತ್ರತಂಡ ಪೋಲೆಂಡ್ ನಿಂದ ವಾಪಾಸ್ ಆಗಿತ್ತು. ಆದರೆ ಒಬ್ಬ ಅಕೌಂಟೆಂಟ್ ಅನ್ನು ಅಜಯ್ ಪಾಲ್ ಬಳಿ ಒತ್ತೆ ಇಟ್ಟು ವಾಪಾಸ್ ಆಗಿದ್ದರು. ಆ ನಂತರ ಕೇಂದ್ರ ಸಚಿವರ ನೆರವಿಂದ ಒತ್ತೆ ಇಟ್ಟಿದ್ದ ಅಕೌಂಟೆಂಟ್ ಅನ್ನು ವಾಪಾಸ್ ಭಾರತಕ್ಕೆ ಕರೆಸಿಕೊಂಡಿದ್ದರು.
ಈಗ ಮತ್ತೆ ರಿಲೀಸ್ ಸಮಯದಲ್ಲಿ ತೊಂದರೆ ಕೊಡುತ್ತಿರುವುದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿದೆ ನಿರ್ಮಾಪಕ ಸೂರಪ್ಪಬಾಬು ಹೇಳಿದ್ದಾರೆ. ಚಿತ್ರದ ಟೀಸರ್ ಅನ್ನು ಮತ್ತೆ ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಿ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


