ಕೊರೋನಾ ಭೀತಿ: ನಟ ಶಿವರಾಜ್ ಕುಮಾರ್ ಶಬರಿಮಲೆ ಯಾತ್ರೆ ರದ್ದು
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಚಿತ್ರೀಕರಣ, ಚಿತ್ರ ಪ್ರದರ್ಶನ ಮೊಟಕುಗೊಂಡಿದ್ದು, ಇದೀಗ ಚಿತ್ರನಟ ಶಿವರಾಜ್ ಕುಮಾರ್ ಅವರ ಶಬರಿ ಮಲೆ ಯಾತ್ರೆ ಸಹ ರದ್ದಾಗಿದೆ.

ಬೆಂಗಳೂರು: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಚಿತ್ರೀಕರಣ, ಚಿತ್ರ ಪ್ರದರ್ಶನ ಮೊಟಕುಗೊಂಡಿದ್ದು, ಇದೀಗ ಚಿತ್ರನಟ ಶಿವರಾಜ್ ಕುಮಾರ್ ಅವರ ಶಬರಿ ಮಲೆ ಯಾತ್ರೆ ಸಹ ರದ್ದಾಗಿದೆ.
ಶಿವಕುಮಾರ್ ಕುಮಾರ್ ಅವರು ಪ್ರತಿ ವರ್ಷ ಮಾಲೆ ಧರಿಸಿಕೊಂಡು ತಮ್ಮ ಆತ್ಮೀಯರೊಂದಿಗೆ ಶಬರಿಮಲೆಯ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ಹೋಗುತ್ತಿದ್ದರು. ಅದರಂತೆ ಈ ಬಾರಿಯೂ ಅವರ ಸ್ವಾಮಿ ಅಯ್ಯಪ್ಪ ದೇವಾಲಯಕ್ಕೆ ಹೋಗಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಕೊರೋನಾ ವೈರಸ್ ಭೀತಿಯಿಂದಾಗಿ ಶಿವರಾಜ್ ಕುಮಾರ್ ಅವರು ಶಬರಿ ಮಲೆ ಯಾತ್ರೆಯನ್ನು ರದ್ದುಗೊಳಿಸಿದ್ದಾರೆ.
ಇಂದು ಅವರು ತಮ್ಮ ನಿವಾಸದಲ್ಲೇ ಪೂಜೆ ಮಾಡಿ ಮಾಲೆ ಬಿಚ್ಚಿದರು. ಸಹೋದರ ರಾಘವೇಂದ್ರ ರಾಜ್ ಕುಮಾರ್ ಸೇರಿ ಕುಟುಂಬ ಸದಸ್ಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


