5ನೇ ಬಾರಿಯೂ ಗಾಯಕಿ ಕನಿಕಾ ಕಪೂರ್ ಕರೋನಾ ವೈರಸ್ ಟೆಸ್ಟ್ ಪಾಸಿಟಿವ್, ಆರೋಗ್ಯ ಸ್ಥಿರ ಎಂದ ವೈದ್ಯರು
ಬಾಲಿವುಡ್ ಗಾಯಕಿ ಕನಿಕಾ ಕಪೂರ್'ಗೆ 5ನೇ ಬಾರಿಯೂ ಕೊರೋನಾ ವೈರಸ್ ಪರೀಕ್ಷೆ ಮಾಡಲಾಗಿದ್ದು, ಇನ್ನೂ ಅವರಿಗೆ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಲಖನೌ: ಬಾಲಿವುಡ್ ಗಾಯಕಿ ಕನಿಕಾ ಕಪೂರ್'ಗೆ 5ನೇ ಬಾರಿಯೂ ಕೊರೋನಾ ವೈರಸ್ ಪರೀಕ್ಷೆ ಮಾಡಲಾಗಿದ್ದು, ಇನ್ನೂ ಅವರಿಗೆ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಪ್ರತೀ 48 ಗಂಟೆಗಳಿಗೊಮ್ಮೆ ಕನಿಕಾ ಕಪೂರ್ ಅವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು , ಈಗಲೂ ಅವರಲ್ಲಿ ವೈರಸ್ ದೃಢವಾಗಿದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಕನಿಕಾ ಕಪೂರ್ ಅವರು, ಸಂಜಯ್ ಗಾಂಧಿ ಪೋಸ್ಟ್ ಗ್ರಾಡ್ಜುಯೇಟ್ ಇಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕನಿಕಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ವದಂತಿಗಳನ್ನು ತಿರಸ್ಕರಿಸಿರುವ ಆಸ್ಪತ್ರೆಯ ವೈದ್ಯರು, ಕನಿಕಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಂತೆಪಡುವ ಅಗತ್ಯಗಳಿಲ್ಲ ಎಂದು ಹೇಳಿದ್ದಾರೆ.
ಮಾರ್ಚ್ 20ರಂದು ತಮಗೆ ಕೊರೋನಾ ವೈರಸ್ ಇರುವುದಾಗಿ ಕನಿಕಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದರು. ಕನಿಕಾ ಅವರ ಈ ಹೇಳಿಕೆ ರಾಜಕೀಯ ವಲಯದ ಘಟಾನುಘಟಿಗಳ ಎದೆ ನಡುಗುವಂತೆ ಮಾಡಿತ್ತು. ಏಕೆಂದರೆ, ಕನಿಕಾ ಅವರು ತಮಗೆ ವೈರಸ್ ಇದೆ ಎಂದು ಹೇಳಿದ ಹಿಂದಿನ ದಿನವಷ್ಟೇ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಹಲವಾರು ರಾಜಕಾರಣಿಗಲು, ಉದ್ಯಮಿಗಲು ಹಾಗೂ ವರಿಷ್ಠರು ಭಾಗಿಯಾಗಿದ್ದರು. ಪ್ರಕರಣ ಸಂಬಂಧ ನಿರ್ಲಕ್ಷ್ಯ ವಹಿಸಿದ್ದ ಕಾರಣ ಕನಿಕಾ ವಿರುದ್ಧ ಹಝರತ್ ಗಂಜ್ ಹಾಗೂ ಗೋಮ್ಟಿ ನಗರ್ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


