ಸಿನಿಮಾ ಸುದ್ದಿ

ಶ್ರೀರಾಮನವಮಿಗೆ 'ರಾಬರ್ಟ್' ಕೊಡ್ತಿದ್ದಾನೆ ಈ ವಿಶೇಷ ಗಿಫ್ಟ್!

ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ಗೆ ತೆರೆಗೆ ಬರಬೇಕಿತ್ತು. ಆದರೆ ಮಹಾಮಾರಿ ಕೊರೊನಾ ವೈರಸ್ ಹಾವಳಿಯ ಪರಿಣಾಮ ರಾಬರ್ಟ್ ರಿಲೀಸ್ ಮುಂದಕ್ಕೆ ಹೋಗಿದೆ.

ಶ್ರೀರಾಮನವಮಿಗೆ 'ರಾಬರ್ಟ್' ಕೊಡ್ತಿದ್ದಾನೆ ಈ ವಿಶೇಷ ಗಿಫ್ಟ್!
ಶ್ರೀರಾಮನವಮಿಗೆ 'ರಾಬರ್ಟ್' ಕೊಡ್ತಿದ್ದಾನೆ ಈ ವಿಶೇಷ ಗಿಫ್ಟ್!
Published On :

ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ಗೆ ತೆರೆಗೆ ಬರಬೇಕಿತ್ತು. ಆದರೆ ಮಹಾಮಾರಿ ಕೊರೊನಾ ವೈರಸ್ ಹಾವಳಿಯ ಪರಿಣಾಮ ರಾಬರ್ಟ್ ರಿಲೀಸ್ ಮುಂದಕ್ಕೆ ಹೋಗಿದೆ.

ಈ ಸಂದರ್ಭದಲ್ಲಿ ಅಭಿಮಾನಿಗಳ ಬೇಸರ ಕಳೆಯಲು ರಾಬರ್ಟ್ ತಂಡದಿಂದ ಸಂತಸದ ಸುದ್ದಿ ಹೊರಬಿದ್ದಿದ್ದು, ರಾಮನವಮಿಗೆ ರಾಬರ್ಟ್ ತಂಡ ವಿಶೇಷ ಉಡುಗೊರೆ ನೀಡಲು ಸಜ್ಜಾಗಿದ್ದು, ಯೂಟ್ಯೂಬ್ ನಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. 

ಈ ಕುರಿತು ಚಿತ್ರದ ನಿರ್ದೇಶಕ ತರುಣ್ ಸುಧೀರ್ ಟ್ವೀಟ್ ಮಾಡಿದ್ದು "ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ರಾಬರ್ಟ್ ತಂಡದಿಂದ ಜೈ ಶ್ರೀರಾಮ್ ಹಾಡಿನ ಹೊಸ ಅವತರಣಿಕೆ ಬಿಡುಗಡೆ ಆಗಲಿದೆ. " ಹೆಚ್ಚಿನ ವಿವರಗಳಿಗೆ ನಾಳೆಯವರೆಗೆ ನಿರೀಕ್ಷಿಸಿ" ಎಂದಿದ್ದಾರೆ.

ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯವಿರುವ ಜೈ ಶ್ರೀರಾಮ್ ಹಾಡು ಈ ಹಿಂದೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಸಾಕಷ್ತು ಸೆನ್ಶೇಷನ್ ಸೃಷ್ಟಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.