ಸಿನಿಮಾ ಸುದ್ದಿ

'ಖರಾಬು' ಹಾಡಿಗೆ ಮನಬಿಚ್ಚಿ ಕುಣಿದ ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಗಳು!ವಿಡಿಯೋ

ಆಕ್ಷನ್ ಫ್ರಿನ್ಸ್ ಧ್ರುವ ಸರ್ಜಾ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ ಪೊಗರು ಚಿತ್ರದ ಖರಾಬು ಹಾಡಿಗೆ ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಗಳು ಮನಬಿಚ್ಚಿ ಕುಣಿದಿದ್ದಾರೆ.

'ಖರಾಬು' ಹಾಡಿಗೆ ಮನಬಿಚ್ಚಿ ಕುಣಿದ ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಗಳು!ವಿಡಿಯೋ
ಪೊಗರು ಚಿತ್ರದ ಪೋಸ್ಟರ್
Published On :

ಬೆಂಗಳೂರು: ಆಕ್ಷನ್ ಫ್ರಿನ್ಸ್ ಧ್ರುವ ಸರ್ಜಾ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ ಪೊಗರು ಚಿತ್ರದ ಖರಾಬು ಹಾಡಿಗೆ ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಗಳು ಮನಬಿಚ್ಚಿ ಕುಣಿದಿದ್ದಾರೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಪೊಗರು ಚಿತ್ರದಲ್ಲಿ ಕ್ಲೈಮ್ಯಾಕ್ಸ್ ದೃಶ್ಯವನ್ನು ವಿಶಿಷ್ಟ ರೀತಿಯಲ್ಲಿ ತೋರಿಸಲಾಗುತ್ತಿದ್ದು,ವಿಶ್ವದಲ್ಲಿಯೇ ಉನ್ನತ ಬಾಡಿ ಬಿಲ್ಡರ್ ಗಳಲ್ಲಿ ಒಬ್ಬರಾದ  ಫ್ರಾನ್ಸ್ ಮೂಲದ ಮೊರ್ಗನ್ ಅಸ್ಟೆ  ಇದೀಗ ಕನ್ನಡ ಚಿತ್ರದ ಮೂಲಕ ಭಾರತೀಯ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಧ್ರುವ ಅವರು ಡ್ವೇನ್ ‘ದಿ ರಾಕ್’ ಜಾನ್ಸನ್ ಅವರ ಜೊತೆ ಕೂಡ ತೆರೆ ಹಂಚಿಕೊಂಡಿದ್ದಾರೆ. 

ಬಿ ಕೆ ಗಂಗಾಧರ್ ನಿರ್ಮಾಣದಲ್ಲಿ ನಂದ ಕಿಶೋರ್ ಆಕ್ಷನ್ ಕಟ್ ಹೇಳಿರುವ  ಪೊಗರು ಚಿತ್ರದಲ್ಲಿ  ರಶ್ಮಿಕಾ ಮಂದಣ್ಣ, ಧನಂಜಯ್ ಮತ್ತಿತರರು ಅಭಿನಯಿಸಿದ್ದಾರೆ. ಕೆಲ ದಿನಗಳಲ್ಲಿ ಚಿತ್ರ ತೆರೆಗೆ ಅಪ್ಪಳಿಸಲಿದ್ದು, ಧ್ರುವ ಸರ್ಜಾ ಹಾಗೂ ರಶ್ಮಿಕಾ ಮಂದಣ್ಣ ಅವರನ್ನು ಅಭಿನಯವನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.