ಸಿನಿ ದಿಗ್ಗಜರ ನಡುವೆ ಜಟಾಪಟಿ: ಜೈಜಗದೀಶ್ ವಿರುದ್ಧ ದೂರು ದಾಖಲು
ಸಾ.ರಾ. ಗೋವಿಂದು ಅವರು ಪ್ರಸ್ತುತ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಮತ್ತು ಚಲನಚಿತ್ರ ಕಾರ್ಮಿಕರ ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬೆಂಗಳೂರು: ಸಾ.ರಾ. ಗೋವಿಂದು ಅವರು ಪ್ರಸ್ತುತ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಮತ್ತು ಚಲನಚಿತ್ರ ಕಾರ್ಮಿಕರ ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೊರೊನಾ ವೈರಸ್ ಹರಡುವುದನ್ನು ತಪ್ಪಿಸುವ ಸಲುವಾಗಿ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಹಲವರು ಉದ್ಯೋಗ ಕಳೆದುಕೊಂಡ ಊಟ-ತಿಂಡಿ ಮಾಡಲು ಪರದಾಡುತ್ತಿದ್ದಾರೆ. ಹೀಗಾಗಿ ಈ ವೇಳೆ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ ಇವರಿಗೆಲ್ಲ ಸಹಾಯ ಮಾಡಲು ವಾಣಿಜ್ಯ ಮಂಡಳಿ ಸದಸ್ಯ ಕೆ.ಎಂ.ವೀರೇಶ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿ ಸರ್ಕಾರದೊಂದಿಗೆ ಮಾತನಾಡಿತ್ತು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾತೃ ಸಂಸ್ಥೆಯಾಗಿದ್ದು, ನಿರ್ಮಾಪಕ, ವಿತರಕ, ಪ್ರದರ್ಶಕ ಮೂರು ವಲಯಗಳು ಇದರಲ್ಲಿ ಒಳಗೊಂಡಿವೆ. ಈ ಬಗ್ಗೆ ಕೋಪಗೊಂಡಿದ್ದ ನಟ ಜೈ ಜಗದೀಶ್ 'ನಿರ್ಮಾಪಕರು ಅನ್ನದಾತರು, ಸಾವಿರಾರು ಜನಕ್ಕೆ ಅನ್ನವನ್ನು ನೀಡಿದ್ದಾರೆ. ನಮಗೆ ಆಹಾರದ ಕಿಟ್ ನೀಡಿ ಅವಮಾನ ಮಾಡಬೇಡಿ' ಎಂದು ಹೇಳಿದ್ದರು. ಅಷ್ಟೇ ಅಲ್ಲದೆ ಸಾ ರಾ ಗೋವಿಂದು ಅವರಿಗೆ ನಿಂದಿಸಿ ಬೈದಿದ್ದರು.
ಅವರು ಮಾತನಾಡಿದ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿ ಸಾಕಷ್ಟು ಚರ್ಚೆಯನ್ನುಂಟು ಮಾಡಿತ್ತು. ಈ
ಕುರಿತು ಸಾ ರಾ ಗೋವಿಂದು ಅವರು ಜೈ ಜಗದೀಶ್ ವಿರುದ್ಧ ಹೈ ಗ್ರೌಂಡ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


