ಚಿತ್ರರಂಗದ ಸಂಕಷ್ಟವನ್ನೂ ಗಮನಿಸಿ: ಮುಖ್ಯಮಂತ್ರಿಗಳಿಗೆ ನಟಿ ತಾರಾ ಪತ್ರ
ಜಗತ್ತಿನಾದ್ಯಂತ ಮಾರಣಾಂತಿಕ ಕೊರೋನಾ ವೈರಾಣು ತಾಂಡವವಾಡುತ್ತಿದ್ದು, ಕರ್ನಾಟಕ ರಾಜ್ಯವೂ ಸಹ ಪೀಡನೆಯಿಂದ ಹೊರತಾಗಿಲ್ಲ. ಇಂತಹ ಸಂದರ್ಭದಲ್ಲಿ ಕನ್ನಡ ಚಿತ್ರರಂಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ನೆರವು ಕೋರಿ ಸರ್ಕಾರದ ಮೊರೆ ಹೊಕ್ಕಿದೆ. ಈ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಬಿಜೆಪಿ ನಾಯಕಿ,ನಟಿ ತಾರಾ ಅನುರಾಧ, ಚಿತ್ರರಂಗಕ್ಕೂ ಸಹಾ

ಜಗತ್ತಿನಾದ್ಯಂತ ಮಾರಣಾಂತಿಕ ಕೊರೋನಾ ವೈರಾಣು ತಾಂಡವವಾಡುತ್ತಿದ್ದು, ಕರ್ನಾಟಕ ರಾಜ್ಯವೂ ಸಹ ಪೀಡನೆಯಿಂದ ಹೊರತಾಗಿಲ್ಲ. ಇಂತಹ ಸಂದರ್ಭದಲ್ಲಿ ಕನ್ನಡ ಚಿತ್ರರಂಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ನೆರವು ಕೋರಿ ಸರ್ಕಾರದ ಮೊರೆ ಹೊಕ್ಕಿದೆ. ಈ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಬಿಜೆಪಿ ನಾಯಕಿ,ನಟಿ ತಾರಾ ಅನುರಾಧ, ಚಿತ್ರರಂಗಕ್ಕೂ ಸಹಾಯ ನೀಡುವಂತೆ ಮನವಿ ಮಾಡಿದ್ದಾರೆ.
ಕೋವಿಡ್ 19 ಸಂಕಷ್ಟದಿಂದ ಪೀಡಿತರಾಗಿರುವ ರಾಜ್ಯದ ವಿವಿಧ ವೃತ್ತಿಪರ ವಿಭಾಗಗಳಿಗಾಗಿ 16 00 ಕೋಟಿ ರೂಪಾಯಿಗಳ ಸಹಾಯ ಹಸ್ತ ಚಾಚಿರುವ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿರುವ ನಟಿ ತಾರಾ, “ಚಿತ್ರರಂಗವೂ ಸಹ ವೃತ್ತಿಪರ ವಿಭಾಗವೇ ಆಗಿದ್ದು, ಕೊರೋನಾ ಲಾಕ್ ಡೌನ್ ಪರಿಣಾಮ ಸಂಕಷ್ಟದಲ್ಲಿದೆ. ಹೀಗಾಗಿ ಈ ವಿಭಾಗವೂ ನೆರವು ಪಡೆಯಲು ಅರ್ಹವಾಗಿದ್ದು, ಪಟ್ಟಿಯಲ್ಲಿ ಸೇರಿಸಿಕೊಳ್ಳಬೇಕು” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ಆರಂಭವಾದ ದಿನದಿಂದಲೂ ಚಿತ್ರರಂಗದ ಚಟುವಟಿಕೆಗಳು ಸ್ತಬ್ಧವಾಗಿವೆ. ಯಾವುದೇ ಹೊಸ ಚಿತ್ರಗಳು ಸೆಟ್ಟೇರಿಲ್ಲ. ಆರಂಭವಾಗಿರುವ ಚಿತ್ರಗಳ ಶೂಟಿಂಗ್ ಅರ್ಧಕ್ಕೇ ನಿಂತಿದೆ. “ಸದ್ಯಕ್ಕೆ ಚಿತ್ರೀಕರಣಕ್ಕೆ ಅವಕಾಶವಿಲ್ಲ. ರೆಕಾರ್ಡಿಂಗ್, ಡಬ್ಬಿಂಗ್ ಮೊದಲಾದ ಕಾರ್ಯಗಳನ್ನು ಮುಗಿಸಿಕೊಳ್ಳಿ” ಎಂದು ಕಂದಾಯ ಸಚಿವ ಆರ್. ಅಶೋಕ ಈಗಾಗಲೇ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


