ರಂಜಾನ್ ಹಬ್ಬಕ್ಕೆ ರಗಡ್ ಲುಕ್‍ನಲ್ಲಿ ಬಂದ ‘ರಾಬರ್ಟ್’
ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬದ ಆಚರಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ತಮ್ಮ ಅಭಿಮಾನಿಗಳಿಗೆ ವಿಶೇಷ ಗಿಪ್ಟ್ ನೀಡಿದ್ದಾರೆ. ದರ್ಶನ್ ಅವರ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬದ ಆಚರಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ತಮ್ಮ ಅಭಿಮಾನಿಗಳಿಗೆ ವಿಶೇಷ ಗಿಪ್ಟ್ ನೀಡಿದ್ದಾರೆ. ದರ್ಶನ್ ಅವರ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.
ರಾಬರ್ಟ್ ಚಿತ್ರದ ರಂಜಾನ್ ಸ್ಪೆಷಲ್ ಪೋಸ್ಟರ್ ಬಿಡುಗಡೆಯಾಗಿದ್ದು ದರ್ಶನ್ ಮತ್ತೊಮ್ಮೆ ಹೊಸ ಗೆಟಪ್ ನಲ್ಲಿ ಮಿಂಚಿದ್ದಾರೆ. ಜತೆಗೆ ಮುಸ್ಲಿಂ ಬಾಂಧವರಿಗೆ ರಾಬರ್ಟ್ ಈದ್ ಮುಬಾರಕ್ ತಿಳಿಸಿದ್ದಾರೆ.
"ಎಲ್ಲಾ ನಲ್ಮೆಯ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ಧಿಕ ಶುಭಾಶಯಗಳು. ನಮ್ಮ 'ರಾಬರ್ಟ್' ಚಿತ್ರದ ಪೋಸ್ಟರ್ ನಿಮಗಾಗಿ. ಎಲ್ಲರ ಜೀವನಶೈಲಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಚಿತ್ರವೂ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ , ಮನೆಯವರಿಗಾಗಿ ಜಾಗೃತರಾಗಿರಿ." ದರ್ಶನ್ ಟ್ವಿಟ್ ಮೂಲಕ ಶುಭ ಕೋರಿದ್ದಾರೆ.
ಕೊರೋನಾ ಹಾವಳಿ ಇಲ್ಲದಿದಲ್ಲಿ ಏಪ್ರಿಲ್ ನಲ್ಲೇ ರಾಬರ್ಟ್ ತೆರೆಗೆ ಬರಬೇಕಿತ್ತು. ಆದರೆ ಇದೀಗ ದೇಶಾದ್ಯಂತ ಲಾಕ್ ಡೌನ್ ಆಗಿರುವ ಕಾರಣ ತರುಣ್ ಸುಧೀರ್ ನಿರ್ದೇಶನದ ಚಿತ್ರ ಬಿಡುಗಡೆ ಮುಂದೂಡಲ್ಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


