ರಾಕಿ ಬಾಯ್ ಯಶ್ ಮನೆಗೆ ಟ್ರ್ಯಾಕ್ಟರ್ ಢಿಕ್ಕಿ
ರಾಕಿಂಗ್ ಸ್ಟಾರ್ ಯಶ್ ಅವರ ಮನೆ ಕಂಪೌಂಡಿಗೆ ಟ್ರ್ಯಾಕ್ಟರ್ ಒಂದು ಗುದ್ದಿ ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರು ಹೊಸಕೆರೆಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಮನೆ ಕಂಪೌಂಡಿಗೆ ಟ್ರ್ಯಾಕ್ಟರ್ ಒಂದು ಗುದ್ದಿ ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರು ಹೊಸಕೆರೆಹಳ್ಳಿಯಲ್ಲಿ ನಡೆದಿದೆ.
ಹೊಸಕೆರೆಹಳ್ಳಿಯಲ್ಲಿರುವ ಯಶ್ ಮನೆಯ ಕಂಪೌಂಡ್ ಗೆ ಟ್ರ್ಯಾಕ್ಟರ್ ಗುದ್ದಿದ್ದು ಟ್ರ್ಯಾಕ್ಟರ್ ಬ್ರೇಕ್ ಫೇಲ್ಯೂರ್ ಆದ ಪರಿಣಾಮ ಈ ಅವಘಡ ಸಂಬವಿಸಿದೆ ಎಂದು ಹೇಳಲಾಗಿದೆ.
ಟ್ರ್ಯಾಕ್ಟರ್ ಗುದ್ದಿದ ಪರಿಣಾಮ ಬೈಕೊಂದು ಜಖಂ ಆಗಿದ್ದು ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಇದೇ ವೇಳೆ ಘಟನಾ ಸ್ಥಳದಲ್ಲಿ ನಟ ಯಶ್ ಕುಟುಂಬ ವಾಸವಿರಲಿಲ್ಲ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬನಶಂಕರಿ ಸಂಚಾರಿ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಜೆಸಿಬಿ ಸಹಾಯದೊಡನೆ ಟ್ರ್ಯಾಕ್ಟರ್ ಸ್ಥಳಾಂತರ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


