ತೆರೆ ಮೇಲೆ ಮಿಂಚಲು ತಂದೆ-ಮಗ ಜೋಡಿ ರೆಡಿ! ಒಂದೇ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ವಿಕ್ರಂ ಅಭಿನಯ
ಕ್ರೇಜಿ ಸ್ಟಾರ್ ರವಿಚಂದ್ರನ್ ಜನ್ಮದಿನವವನ್ನು ಈ ವರ್ಷ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಕೊರೋನಾವೈರಸ್ ಸಾಂಕ್ರಾಮಿಕ ಸಮಯದಲ್ಲಿ ಸಮಾಜಿಕ ಅಂತರವನ್ನು ಭ್ಯಾಸ ಮಾಡುವಂತೆ ಅವರು ತಮ್ಮ ಅಭಿಮಾನಿಗಳನ್ನು ಕೋರಿದ್ದಾರೆ.

ಕ್ರೇಜಿ ಸ್ಟಾರ್ ರವಿಚಂದ್ರನ್ ಜನ್ಮದಿನವವನ್ನು ಈ ವರ್ಷ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಕೊರೋನಾವೈರಸ್ ಸಾಂಕ್ರಾಮಿಕ ಸಮಯದಲ್ಲಿ ಸಮಾಜಿಕ ಅಂತರವನ್ನು ಭ್ಯಾಸ ಮಾಡುವಂತೆ ಅವರು ತಮ್ಮ ಅಭಿಮಾನಿಗಳನ್ನು ಕೋರಿದ್ದಾರೆ. ಈ ನಡುವೆ ರವಿಮಾಮ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ತಾವು ಮತ್ತೆ ನಿರ್ದೇಶಕನ ಕ್ಯಾಪ್ ಧರಿಸುವುದನ್ನು ಕಾಣಬೇಕೆನ್ನುವ ಅವರ ಅಭಿಮಾನಿಗಳ ಆಸೆ ಶೀಘ್ರವೇ ಈಡೇರುವ ಭರವಸೆಯನ್ನವರು ಕೊಟ್ಟಿದ್ದಾರೆ.
ರವಿಚಂದ್ರನ್ ಅವರ ಪುತ್ರನ ಸಿನಿಮಾವನ್ನು ನಿರ್ದೇಶನ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ನಟ-ನಿರ್ದೇಶಕ-ನಿರ್ಮಾಪಕ, ಅಭಿಮಾನಿಗಳ ಕ್ರೇಜಿ ಸ್ಟಾರ್ ತಮ್ಮ ಪುತ್ರನಿಗಾಗಿ ಸ್ಕ್ರಿಪ್ಟ್‌ನ ತಯಾರಿ ನಡೆಸಲು ಲಾಕ್‌ಡೌನ್ ಸಮಯವನ್ನು ಬಳಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ ಜತೆಗೆ ಅವರ ಎರಡನೇ ಮಗನಾದ ವಿಕ್ರಂ ರವಿಚಂದ್ರನ್ ತೆರೆಯ ಮೇಲೆ ಕಾಣಿಸಲಿದ್ದಾರೆ.
ಲಾಕ್‌ಡೌನ್ ಸಮಯದಲ್ಲಿ ಎಡಿಟ್ ಡೆಸ್ಕ್‌ನಲ್ಲಿ ನಿರತರಾಗಿರುವ ಹಿರಿಯ ನಟ ಚಿತ್ರಕಥೆಯ ಬಗ್ಗೆ ಸುಳಿವು ನೀಡಿಲ್ಲ. “ನಾನು ರವಿ ಬೋಪಣ್ಣ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದೇನೆ ಮತ್ತು ಈ ನಡುವೆ ಮೂರು ಸ್ಕ್ರಿಪ್ಟ್‌ಗಳನ್ನು ಪೂರ್ಣಗೊಳಿಸಿದೆ.ಒಂದು ಚಿತ್ರದಲ್ಲಿ ತಂದೆ ಮತ್ತು ಮಗ ಒಟ್ಟಿಗೆಸೇರಲಿದ್ದೇವೆ. ನಾನು ಹಾಗೂ ವಿಕ್ರಮ್ ಆ ಚಿತ್ರದಲ್ಲಿ ಒಟ್ತಾಗಿ ಕಾಣಿಸಿಕೊಳ್ಳುತ್ತಿದ್ದು ಚಿತ್ರ ನಿರ್ದೇಶನ ನನ್ನದ್ ಆಗಿರಲಿದೆ.
"ಇದು ನನ್ನ ಕಡೆಯಿಂದ ಇನ್ನೊಂದು ವಿಶಿಷ್ಟ ಪ್ರಯತ್ನವಾಗಿದೆ. ವಿನೂತನ ಚಿತ್ರಕಥೆಯನ್ನಿದು ಹೊಂದಿರಲಿದೆ. ರಾಜ್ಯವು ಲಾಕ್ ಡೌನ್ ನಿಂದ ಹೊರಬಂದ ನಂತರ ನಾನು ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುತ್ತೇನೆ" ರವಿಚಂದ್ರನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


