ಎಸ್‍ಪಿಬಿ, ಲಕ್ಷ್ಮೀ ಅಭಿನಯದ ‘ಮಿಥುನಂ’ ಕನ್ನಡಕ್ಕೆ; ಮುಂದಿನ ತಿಂಗಳು ಬಿಡುಗಡೆ
ಸಂಗೀತ ಪ್ರೇಮಿಗಳ ಹೃದಯದಲ್ಲಿ ಚಿರಸ್ಥಾಯಿಯಾಗಿರುವ ಗಾನ ಗಾರುಡಿಗ ದಿವಂಗತ ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಗೂ ಪಂಚ ಭಾಷಾ ತಾರೆ ಲಕ್ಷ್ಮೀ ಅಭಿನಯದ ತೆಲುಗಿನ ಸೂಪರ್ ಹಿಟ್ ಚಿತ್ರ 'ಮಿಥುನಂ' ಕನ್ನಡಕ್ಕೆ ಡಬ್ ಆಗುತ್ತಿದೆ.

ಸಂಗೀತ ಪ್ರೇಮಿಗಳ ಹೃದಯದಲ್ಲಿ ಚಿರಸ್ಥಾಯಿಯಾಗಿರುವ ಗಾನ ಗಾರುಡಿಗ ದಿವಂಗತ ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಗೂ ಪಂಚ ಭಾಷಾ ತಾರೆ ಲಕ್ಷ್ಮೀ ಅಭಿನಯದ ತೆಲುಗಿನ ಸೂಪರ್ ಹಿಟ್ ಚಿತ್ರ 'ಮಿಥುನಂ' ಕನ್ನಡಕ್ಕೆ ಡಬ್ ಆಗುತ್ತಿದೆ.
ಆನಂದ್ ಮುಯಿದ ರಾವು ನಿರ್ಮಿಸಿ, ತನಿಕೆಳ್ಳ ಭರಣಿ ನಿರ್ದೇಶಿಸಿದ್ದ ಈ ಚಿತ್ರಕ್ಕೆ ಸೌಂಡ್ ಆಫ್ ಮ್ಯೂಸಿಕ್ ಗುರುರಾಜ್ ಅವರ ಸ್ಟುಡಿಯೋದಲ್ಲಿ ಡಬ್ಬಿಂಗ್ ಕಾರ್ಯ ನಡೆಯುತ್ತಿದೆ.
2012ರಲ್ಲಿ ಬಿಡುಗಡೆಯಾಗಿದ್ದ 'ಮಿಥುನಂ' ಚಿತ್ರ ಶ್ರೀಚರಣ ಬರೆದಿದ್ದ ಅದೇ ಹೆಸರಿನ ಕಾದಂಬರಿ ಆಧಾರಿತವಾಗಿತ್ತು.
ಡಬ್ಬಿಂಗ್ ಮುಗಿದ ನಂತರ ಇದೇ ಡಿಸೆಂಬರ್ ನಲ್ಲಿ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಮಾಡಲು ಯೋಜಿಸಲಾಗಿದೆ. ಕನ್ನಡದಲ್ಲಿ ಈ ಚಿತ್ರ "ಮಿಥುನ" ಹೆಸರಲ್ಲಿ ಬರುತ್ತಿದ್ದು ಹೊಸ ಸಿನಿಮಾಗಳ ಬಿಡುಗಡೆಯ ನಡುವೆ ಹಳೆಯ ಚಿತ್ರವೊಂದು ಡಬ್ ಆಗಿ ಕನ್ನಡದಲ್ಲಿ ರಿಲೀಸ್ ಆಗುತ್ತಿರುವುದು ವಿಶೇಷವೆನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


