ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ: 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶಾರೂಖ್ ಖಾನ್
ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ 55 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ ಅಭಿಮಾನಿಗಳ ಮುಂದುವರಿದ ಪ್ರೀತಿಗಾಗಿ ಧನ್ಯವಾದ ಸಲ್ಲಿಸಿದ್ದು, ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ ಮಾಡೋಣ ಎಂದು ಹೇಳಿದ್ದಾರೆ.

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ 55 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ ಅಭಿಮಾನಿಗಳ ಮುಂದುವರಿದ ಪ್ರೀತಿಗಾಗಿ ಧನ್ಯವಾದ ಸಲ್ಲಿಸಿದ್ದು, ಮುಂದಿನ ವರ್ಷ ದೊಡ್ಡದಾದ, ಉತ್ತಮ ಪಾರ್ಟಿ ಮಾಡೋಣ ಎಂದು ಹೇಳಿದ್ದಾರೆ.
ಪ್ರತಿ ವರ್ಷ ಹುಟ್ಟುಹಬ್ಬ ಬಂತೆಂದರೆ ಸಾಕು, ತನ್ನ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಶಾರೂಖ್ ಖಾನ್ ಅವರ ಬಾಂದ್ರಾದಲ್ಲಿನ ಬಂಗಲೆಯ ಮುಂಭಾಗ ನೆರೆಯುತ್ತಿದ್ದರು. ಆದರೆ, ಈ ಬಾರಿ ಕೊರೋನಾ ವೈರಸ್ ಕಾರಣದಿಂದಾಗಿ ಪೊಲೀಸರು ಬ್ಯಾರಿಕೇಡ್ ಹಾಗೂ ಸುರಕ್ಷತೆ ಮೂಲಕ ಅವರ ಮನೆಗೆ ಅಭಿಮಾನಿಗಳು ಹೋಗುವುದನ್ನು ನಿರ್ಬಂಧಿಸಲಾಗಿತ್ತು.
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಟ್ವೀಟರ್ ನಲ್ಲಿ ವಿಡಿಯೋವೊಂದನ್ನು ಫೋಸ್ಟ್ ಮಾಡಿರುವ ಶಾರೂಖ್ ಖಾನ್, ತಮ್ಮ ಅಭಿಮಾನಿ ಬಳಗದವರು ನಡೆಸಿರುವ ರಕ್ತದಾನ, ಪಿಪಿಇ ಕಿಟ್ ವಿತರಣೆ ಮತ್ತಿತರ ಅನೇಕ ಸಾಮಾಜಿಕ ಸೇವಾ ಕಾರ್ಯಗಳಿಂದ ತಾವು ಆಕರ್ಷಿತರಾಗಿರುವುದಾಗಿ ತಿಳಿಸಿದ್ದಾರೆ.
'' ನಿಮ್ಮೆಲ್ಲರಿಗೂ ಧನ್ಯವಾದಗಳು. ನಾನು ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ. ಮುಂದಿನ ವರ್ಷ ನಾವೆಲ್ಲರೂ ಒಗ್ಗೂಡಿ ದೊಡ್ಡದಾದ ಉತ್ತಮವಾದ ಪಾರ್ಟಿಯನ್ನು ನಡೆಸುತ್ತೇವೆ. 55ನೇ ಜನ್ಮ ದಿನಕ್ಕಿಂತ 56ನೇ ಜನ್ಮ ದಿನ ಉತ್ತಮವಾಗಿರಲಿದೆ ಎಂದು ಐಪಿಎಲ್ ಹಿನ್ನೆಲೆಯಲ್ಲಿ ಸದ್ಯ ದುಬೈನಲ್ಲಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬೆಂಬಲಿಸುತ್ತಿರುವ ಶಾರೂಖ್ ಖಾನ್ ತಿಳಿಸಿದ್ದಾರೆ.
ಶಾರೂಖ್ ಖಾನ್ ಜಗತ್ತಿನಾದ್ಯಂತ ಅಭಿಮಾನಿ ಬಳಗವನ್ನು ಹೊಂದಿದ್ದು, ಟ್ವೀಟರ್ ನಲ್ಲಿ 4 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಲಿದ್ದಾರೆ. ಲಂಡನ್, ನ್ಯೂಯಾರ್ಕ್, ಮಲೇಷ್ಯಾ ಸೇರಿದಂತೆ ದೇಶದ ಹಲವೆಡೆಗಳಿಂದ ಟ್ವೀಟರ್ ಲೈವ್ ನಲ್ಲಿ ಕೇಕ್ ಕಟ್ ಮಾಡಿ ಶಾರೂಖ್ ಖಾನ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


