ಡಾಲಿ ಧನಂಜಯ್ ನಟನೆಯ 'ರತ್ನನ್ ಪ್ರಪಂಚ' ಶೂಟಿಂಗ್ ನವೆಂಬರ್ 9 ರಿಂದ ಆರಂಭ
ಡಾಲಿ ಧನಂಜಯ ನಟನೆಯ ರತ್ನನ್ ಪ್ರಪಂಚ ಸಿನಿಮಾ ಶೂಟಿಂಗ್ ನವೆಂಬರ್ 9 ರಿಂದ ಆರಂಭವಾಗಲಿದೆ, ರೋಹಿತ್ ಪಡಕಿ ನಿರ್ದೇಶನದ ರತ್ನನ್ ಪ್ರಪಂಚ ಕಮರ್ಷಿಯಲ್ ಎಂಟರ್ಟೈನರ್ ಆಗಿದ್ದು, ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

ಡಾಲಿ ಧನಂಜಯ ನಟನೆಯ ರತ್ನನ್ ಪ್ರಪಂಚ ಸಿನಿಮಾ ಶೂಟಿಂಗ್ ನವೆಂಬರ್ 9 ರಿಂದ ಆರಂಭವಾಗಲಿದೆ, ರೋಹಿತ್ ಪಡಕಿ ನಿರ್ದೇಶನದ ರತ್ನನ್ ಪ್ರಪಂಚ ಕಮರ್ಷಿಯಲ್ ಎಂಟರ್ಟೈನರ್ ಆಗಿದ್ದು, ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.
ಶೂಟಿಂಗ್ ಗಾಗಿ ಚಿತ್ರತಂಡ ಸ್ಥಳಗಳನ್ನು ಗುರುತಿಸಿದ್ದು, ಮೊದಲಿಗೆ ಮೈಸೂರು, ನಂತರ ಹಾವೇರಿಯಲ್ಲಿ ಶೂಟಿಂಗ್ ನಡೆಯಲಿದೆ, ಕಾಶ್ಮೀರದಲ್ಲಿ ಶೂಟಿಂಗ್ ನಡೆಸುವ ಸಾಧ್ಯತೆಯಿದೆ,
ಧನಂಜಯ್ ಸದ್ಯ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿ ನಟ, ಮೂರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಸ್ಯಮಯ ಚಿತ್ರ ರತ್ನನ್ ಪ್ರಪಂಚ ಶೂಟಿಂಗ್ ಸೆಟ್ ಗೆ ಧನಂಜಯ ಶೀಘ್ರವೇ ಸೇರ್ಪಡೆಯಾಗಲಿದ್ದಾರೆ. ಸಾಮಾನ್ಯ ವ್ಯಕ್ತಿಯ ಪಾತ್ರದಲ್ಲಿ ಧನಂಜಯ್ ನಟಿಸಿದ್ದು, ರೆಬಾ ಮೋನಿಕಾ ನಾಯಕಿಯಾಗಿದ್ದಾರೆ.
ಇನ್ನೂ ಸಿನಿಮಾದಲ್ಲಿ ಹಿರಿಯ ನಟಿ ಉಮಾಶ್ರಿ, ಐದು ವರ್ಷಗಳ ನಂತರ ಮತ್ತೆ ಸಿನಿಮಾಗಾಗಿ ಬಣ್ಣ ಹಚ್ಚುತ್ತಿದ್ದಾರೆ, ಮಧ್ಯಮ ವರ್ಗದ ತಾಯಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದ್ದು, ಶ್ರೀಶ ಕುಡವಲ್ಲಿ ಸಿನಿಮಾಟೋಗ್ರಫಿಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


