ಸಿನಿಮಾ ಸುದ್ದಿ

ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾಗೆ ಜಾಮೀನು ನಿರಾಕರಿಸಿದ ಹೈಕೋರ್ಟ್, ನಟಿಯರಿಗೆ ಜೈಲೇ ಗತಿ

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ತಿರಸ್ಕರಿಸಿದೆ.

ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾಗೆ ಜಾಮೀನು ನಿರಾಕರಿಸಿದ ಹೈಕೋರ್ಟ್, ನಟಿಯರಿಗೆ ಜೈಲೇ ಗತಿ
ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ
Published On :

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ತಿರಸ್ಕರಿಸಿದೆ.

ಜಾಮೀನು ಕೋರಿ ರಾಗಿಣಿ, ಸಂಜನಾ ಹಾಗೂ ಇತರೆ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ, ಅಕ್ಟೋಬರ್ 24 ರಂದು ತೀರ್ಪು ಕಾಯ್ದಿರಿಸಿದ್ದರು. 

ಇಂದು ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದಾರೆ. ಇದರಿಂದ ಜಾಮೀನು ನಿರೀಕ್ಷೆಯಲ್ಲಿದ್ದ ನಟಿಯವರಿಗೆ ತೀವ್ರ ನಿರಾಶೆಯಾಗಿದೆ.

ಕಳೆದ ಎರಡು ತಿಂಗಳಿಂದ ಜೈಲಿನಲ್ಲಿರುವ ನಟಿಯರು ಈಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.