ಮೆಗಾಸ್ಟಾರ್ ಚಿರುಗೆ ಕೊರೊನಾ ಸೋಂಕು ತಗಲಿಯೇ ಇಲ್ಲ; ದೋಷಪೂರಿತ ಆರ್ಟಿಪಿಸಿಆರ್ ಕಿಟ್ನಿಂದ ಅವಾಂತರ..!
ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳು ನಿಜಕ್ಕೂ ಇದು ಸಿಹಿ ಸುದ್ದಿ. ತಮಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಚಿರಂಜೀವಿ ಖುದ್ದು ಟ್ವೀಟರ್ ನಲ್ಲಿ ಬಹಿರಂಗಪಡಿಸಿದ್ದಾರೆ.

ಹೈದರಾಬಾದ್: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳು ನಿಜಕ್ಕೂ ಇದು ಸಿಹಿ ಸುದ್ದಿ. ತಮಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಚಿರಂಜೀವಿ ಖುದ್ದು ಟ್ವೀಟರ್ ನಲ್ಲಿ ಬಹಿರಂಗಪಡಿಸಿದ್ದಾರೆ.
ಆರ್ಟಿ ಪಿಸಿಆರ್ ಕಿಟ್ ನ ದೋಷದಿಂದಾಗಿ ತಪ್ಪಾಗಿ ತಮಗೆ ಕೋವಿಡ್-19 ಸೋಂಕು ತಗುಲಿದೆ ಎಂದು ನಿರ್ಧರಿಸಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಮಗೆ, ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ, ಅನುಮಾನ ಬಂದು ಅಪೋಲೋ ವೈದ್ಯರ ತಂಡವನ್ನು ಸಂಪರ್ಕಿಸಿದ್ದಾಗಿ ಎಂದು ಚಿರಂಜೀವಿ ಹೇಳಿದ್ದಾರೆ. ಅವರು ನಡೆಸಿದ ಸಿಟಿ ಸ್ಕ್ಯಾನ್ನಲ್ಲಿ ನೆಗೆಟಿವ್ ವರದಿ ಬಂದಿದೆ. ಅಂತಿಮವಾಗಿ ತಮಗೆ ಪಾಸಿಟಿವ್ ವರದಿ ಬಂದಿದ್ದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಿಸಿದರೂ ಸಹ ನೆಗೆಟಿವ್ ವರದಿ ಬಂದಿದೆ ಎಂದು ಅವರು ಟ್ವೀಟ್ ನಲ್ಲಿ ವಿವರಿಸಿದ್ದಾರೆ.
ಈ ಮೂರು ವರದಿಗಳ ನಂತರ, ವೈದ್ಯರು ತಮಗೆ ಕೊರೊನಾ ಸೋಂಕು ತಗುಲಿಯೇ ಇಲ್ಲ ಎಂದು ದೃಢಪಡಿಸಿದ್ದಾರೆ ಎಂದು ಹೇಳಿದ್ದಾರೆ. ಈ ವಿಷಯ ಚಿರು ಅಭಿಮಾನಿಗಳು ನಿಟ್ಟುಸಿರು ಬಿಡುವಂತೆ ಮಾಡಿದೆ. ಈ ಸಂದರ್ಭದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಎಲ್ಲ ಅಭಿಮಾನಿಗಳಿಗೆ ಚಿರಂಜೀವಿ ವಿಶೇಷ ಧನ್ಯವಾದ ಅರ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


