ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಅಶ್ಲೀಲ ಚಿತ್ರ ಅಪ್ ಲೋಡ್, ದೂರು ದಾಖಲು
ಅಭಿನಯದಿಂದ ದೂರವುಳಿದು ಕೃಷಿ ಕಾಯಕವಾಯಿತು, ತಾವಾಯಿತು ಎಂಬಂತಿರುವ ನಟ ವಿನೋದ್ ರಾಜ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಭಾವಚಿತ್ರಗಳನ್ನು ಅಪ್ ಲೋಡ್ ಮಾಡಲಾಗುತ್ತಿದೆ.

ಬೆಂಗಳೂರು: ಅಭಿನಯದಿಂದ ದೂರವುಳಿದು ಕೃಷಿ ಕಾಯಕವಾಯಿತು, ತಾವಾಯಿತು ಎಂಬಂತಿರುವ ನಟ ವಿನೋದ್ ರಾಜ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಭಾವಚಿತ್ರಗಳನ್ನು ಅಪ್ ಲೋಡ್ ಮಾಡಲಾಗುತ್ತಿದೆ.
ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ನಟ ವಿನೋದ್ ರಾಜ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು ಉತ್ತರ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿನೋದ್ ರಾಜ್ ಅವರು ಈ ಕುರಿತಾಗಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಿಡಿಗೇಡಿಗಳು ಫೇಸ್ಬುಕ್ ನಲ್ಲಿ ವಿನೋದ್ ರಾಜ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದು ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡಿ, ಅಸಭ್ಯ ಬರಹ ಪ್ರಕಟಿಸುತ್ತಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ವಿನೋದ್ ರಾಜ್ ಪೊಲೀಸರಿಗೆ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


