ಒಂದೇ ಚಿತ್ರದಲ್ಲಿ 3 ವಿಭಿನ್ನ ಲುಕ್ ನಲ್ಲಿ ಪ್ರೇಕ್ಷಕರ ಮುಂದೆ ಬರಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಜ್ಜು!
ಸ್ಯಾಂಡಲ್'ವುಡ್'ನಲ್ಲಿ ಭಾರೀ ಯಶಸ್ಸು ಕಂಡ ಟಗರು ಚಿತ್ರದಲ್ಲಿದ್ದ ಶಿವಣ್ಣ ಮತ್ತು ಧನಂಜಯ್ ಮತ್ತೊಂದು ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಬೆಂಗಳೂರು: ಸ್ಯಾಂಡಲ್'ವುಡ್'ನಲ್ಲಿ ಭಾರೀ ಯಶಸ್ಸು ಕಂಡ ಟಗರು ಚಿತ್ರದಲ್ಲಿದ್ದ ಶಿವಣ್ಣ ಮತ್ತು ಧನಂಜಯ್ ಮತ್ತೊಂದು ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.
ತಮಿಳಿನ ಗೋಲಿಸೋಡಾ ಸಿನಿಮಾ ನಿರ್ದೇಶಕ ವಿಜಯ್ ಮಿಲ್ಟನ್ ಅವರು ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲಿ ಶಿವರಾಜ್ ಕುಮಾರ್, ಡಾಲಿ ಧನಂಜಯ್, ಪೃಥ್ವಿ ಅಂಬರ್ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಮತ್ತೆ ಧನಂಜಯ್ ಮತ್ತು ಶಿವಣ್ಣ ಜೋಡಿ ಒಟ್ಟಿಗೆ ಅಭಿಮಾನಿಗಳ ಮುಂದೆ ಬರಲಿದೆ. ಟಗರು ಸಿನಿಮಾದಲ್ಲಿ ಮೋಡಿ ಮಾಡಿದ್ದ ಜೋಡಿ ಇದೀಗ ಮತ್ತೆ ಅಭಿಮಾನಿಗಳ ಮುಂದೆ ಬರ್ತಿರುವುದು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಹೊಸ ಸಿನಿಮಾದ ಮುಹೂರ್ತ ಸಮಾರಂಭ ಇಂದು ನಡೆಯಲಿದೆ. ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮೂರು ವಿಭಿನ್ನ ಲುಕ್ ನಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ವಿಭಿನ್ನ ಪಾತ್ರದಲ್ಲಿ ಶಿವಣ್ಣ ಅವರನ್ನು ಪ್ರೇಕ್ಷಕರಿಗೆ ತೋರಿಸಲು ನಿರ್ದೇಶಕರು ಸಜ್ಜಾಗಿದ್ದಾರೆ.
ಚಿತ್ರದ ಚಿತ್ರೀಕರಣ ಇದೇ ನವೆಂಬರ್ 25 ರಿಂದ ಆರಂಭವಾಗಲಿದೆ. ಚಿತ್ರಕ್ಕೆ ಅನೂಪ್ ಸೀಲಿನ್ ಅವರು ಸಂಗೀತ ನೀಡುತ್ತಿದ್ದು, ಚಿತ್ರಕ್ಕೆ ನಾಯಕಿ ನಟಿಯನ್ನು ಆಯ್ಕೆ ಮಾಡುವ ಅಂತಿಮ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


