ಡಿಸೆಂಬರ್ ಮೊದಲ ವಾರದಲ್ಲಿ ಸುದೀಪ್ ನಟನೆಯ 'ಫ್ಯಾಂಟಮ್' ಕೇರಳದಲ್ಲಿ ಶೂಟಿಂಗ್
ಅನೂಪ್ ಭಂಡಾರಿ ನಿರ್ದೇಶನದ ಸುದೀಪ್ ನಟನೆಯ ಫ್ಯಾಂಟಮ್ ಸಿನಿಮಾ ಇಡೀ ದೇಶದಲ್ಲಿ ಲಾಕ್ ಡೌನ್ ಸಮಯದಲ್ಲಿ ಮೊಟ್ಟ ಮೊದಲ ಬಾರಿಗೆ ಶೂಟಿಂಗ್ ಆರಂಭಿಸಿತು. ಜೂನ್ ತಿಂಗಳಲ್ಲಿ ಶೂಟಿಂಗ್ ಆರಂಭಿಸಿದ ಚಿತ್ರತಂಡ ಹೈದರಾಬಾದ್ ನಲ್ಲಿ ಶೂಟಿಂಗ್ ಮುಗಿಸಿದೆ ಎಂದು ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.

ಅನೂಪ್ ಭಂಡಾರಿ ನಿರ್ದೇಶನದ ಸುದೀಪ್ ನಟನೆಯ ಫ್ಯಾಂಟಮ್ ಸಿನಿಮಾ ಇಡೀ ದೇಶದಲ್ಲಿ ಲಾಕ್ ಡೌನ್ ಸಮಯದಲ್ಲಿ ಮೊಟ್ಟ ಮೊದಲ ಬಾರಿಗೆ ಶೂಟಿಂಗ್ ಆರಂಭಿಸಿತು. ಜೂನ್ ತಿಂಗಳಲ್ಲಿ ಶೂಟಿಂಗ್ ಆರಂಭಿಸಿದ ಚಿತ್ರತಂಡ ಹೈದರಾಬಾದ್ ನಲ್ಲಿ ಶೂಟಿಂಗ್ ಮುಗಿಸಿದೆ, ಈ ಸಂಬಂಧ ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.
ಸುದೀರ್ಘ ಸಮಯದ ನಂತರ ಹೈದರಾಬಾದ್ ನಲ್ಲಿ ಶೂಟಿಂಗ್ ಮುಗಿಸಿದ್ದೇವೆ, ಇದೊಂದು ಬಹುದೊಡ್ಡ ಅನುಭವ, ನಾನು ಶೂಟಿಂಗ್ ಆರಂಭಿಸಿದಾಗಿನಿಂದ ಸಾಕಷ್ಟು ಉತ್ತಮ ಅನುಭವ ಪಡೆದಿದ್ದೇನೆ, ಯೋಚಿಸಿದ್ದನ್ನು ಮುಗಿಸುವುದು ಒಂದು ಸಾಧನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಕೊನೆಯ ಹಂತದ ಶೂಟಿಂಗ್ ಶೀಘ್ರವೇ ಆರಂಭವಾಗಲಿದೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಟ್ವೀಟ್ ಮಾಡಿದ್ದಾರೆ. ಇದರ ಭಾಗವಾಗಿ ಹೈದರಾಬಾದ್ ನಲ್ಲಿ ಸಿಕ್ವೇನ್ಸ್ ಮುಗಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಫ್ಯಾಂಟಮ್ ಚಿತ್ರದ ಇನ್ನೂ 40 ದಿನಗಳ ಶೂಟಿಂಗ್ ಬಾಕಿ ಉಳಿದಿದ್ದು, ಜಾಕ್ ಮಂಜುನಾಥ್ ಅವರ ಬೆಂಬಲದಿಂದ ಹಾಗೂ ತಂತ್ರಜ್ಞರ ಸಹಾಯದಿಂದ ಶೂಟಿಂಗ್ ಮುಗಿದಿದೆ ಎಂದು ಅನೂಪ್ ಭಂಡಾರಿ ತಿಳಿಸಿದ್ದಾರೆ.
ಮುಂದಿನ ಶೂಟಿಂಗ್ ಕೇರಳದಲ್ಲಿ ಆರಂಭವಾಗಲಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಶೂಟಿಂಗ್ ಆರಂಭವಾಗಲಿದೆ, ಹಾಡಿನ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಇದಕ್ಕಾಗಿ ಬೃಹತ್ ಸೆಟ್ ಹಾಕಲಾಗುವುದು.
ಶಾಲಿನಿ ಆರ್ಟ್ ಅಡಿಯಲ್ಲಿ ಮಂಜುನಾಥ ಗೌಡ ಸಿನಿಮಾ ನಿರ್ಮಿಸುತ್ತಿದ್ದು, ಸುದೀಪ್ ವಿಕ್ರಾಂತ್ ರೋಣ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


